ಪಾಂಡವಪುರ ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಕರೆಯಲಾಗಿದ್ದ ಕಾರ್ಯಕರ್ತರ ಸಭೆಯಲ್ಲಿ ಮೈಶುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ್ ಮಾತನಾಡಿದರು. ಸಿ.ಆರ್.ರಮೇಶ ಇತರರು ಇದ್ದರು. 
ಮಂಡ್ಯ

ಸ್ಥಳೀಯ ಸಂಸ್ಥೆ ಚುನಾವಣೆಗಳಿಗೆ ಸಜ್ಜಾಗಿ

ಪ್ರಮುಖ ಮುಖ್ಯಾಂಶಗಳು

  • ಕಾರ್ಯಕರ್ತರ ಸಭೆಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ.ಡಿ.ಗಂಗಾಧರ್ ಕರೆ
ಪಾಂಡವಪುರ : ಮುಂಬರುವ ಜಿಲ್ಲಾ ಪಂಚಾಯಿತಿ ತಾಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಕಾಂಗ್ರೆಸ್ ಕಾರ್ಯಕರ್ತರು ಒಗ್ಗೂಡಿ ಸಜ್ಜಾಗಬೇಕು ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ.ಡಿ.ಗಂಗಾಧರ್ ಹೇಳಿದರು.
ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಆಯೋಜಿಸಿದ್ದ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಯಾವುದೇ ಸಣ್ಣ-ಪುಟ್ಟ ಭಿನ್ನಾಭಿಪ್ರಾಯಗಳಿದ್ದರೂ ಬದಿಗೊತ್ತಿ ಚುನಾವಣೆ ಎದುರಿಸಲು ಪ್ರತಿಯೊಬ್ಬ ಕಾರ್ಯಕರ್ತರು ಮುಂದಾಗಬೇಕು ಎಂದರು.
ಕಾರ್ಯಕರ್ತರು ಯಾರೂ ಕೂಡ ಗೊಂದಲ, ಆತಂಕಕ್ಕೆ ಒಳಗಾಗಬಾರದು. ಅಧಿಕಾರ, ರಾಜಕೀಯ ಪ್ರಾತಿನಿಧ್ಯ ಸಿಕ್ಕಿಲ್ಲ ಎಂಬುದಾಗಿ ನಿರಾಶೆಗೆ ಒಳಗಾಗಬಾರದು. ಮಾರ್ಚ್ ತಿಂಗಳ ಕೊನೆಯಲ್ಲಿ ಕಾರ್ಯಕರ್ತರಿಗೆ ನಿಗಮ-ಮಂಡಳಿಯಲ್ಲಿ ಅವಕಾಶ ಕಲ್ಲಿಸುವುದಲ್ಲದೇ ಮುಂದಿನ ದಿನಗಳಲ್ಲಿ ಸೂಕ್ತ ರಾಜಕೀಯ ಸ್ಥಾನಮಾನ ಕಲ್ಪಿಸಲು ಪಕ್ಷ ಬದ್ಧವಿದೆ. ಹೀಗಾಗಿ ಕಾರ್ಯಕರ್ತರು ತಾಳ್ಮೆಯಿಂದ ಇರಬೇಕು ಎಂದು ತಿಳಿಸಿದರು.
ಮೇಲುಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್-ರೈತಸಂಘದ ಕಾರ್ಯಕರ್ತರು ಒಟ್ಟಾಗಿದ್ದೇವೆ. ಇಬ್ಬರ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಸ್ಪಷ್ಟಪಡಿಸಿದ ಅವರು, ಪಕ್ಷ ನನಗೆ ವಹಿಸಿರುವ ಮೈಶುಗರ್ ಕಾರ್ಖಾನೆ ಅಧ್ಯಕ್ಷ ಜವಾಬ್ದಾರಿಯನ್ನು ಚೆನ್ನಾಗಿ ನಿಭಾಯಿಸುತ್ತಿದ್ದೇನೆ ಎಂದರು.
ಮುಂಬರುವ ದಿನಗಳಲ್ಲಿ ಪಕ್ಷ ಸಂಘಟನೆಯ ಉದ್ದೇಶದಿಂದ ಪಕ್ಷದ ಕಾರ್ಯಕರ್ತರಿಗೆ ಹೋಬಳಿವಾರು ಜಬಾವ್ದಾರಿಗಳನ್ನು ನೀಡಲಾಗುವುದು ಎಂದರು.
ಮುಖಂಡರಾದ ಡಿ.ಹುಚ್ಚೇಗೌಡ, ಚಿಕ್ಕಾಡೆ ಮಹೇಶ್, ಸಿ.ಎಂ.ಶ್ರೀಕಾಂತ್, ಕ್ಯಾತನಹಳ್ಳಿ ಕೃಷ್ಣೇಗೌಡ, ಮೋಹನ್ ಇತರರು ಮಾತನಾಡಿ, ಪಕ್ಷದಲ್ಲಿ ಹಲವಾರು ವರ್ಷಗಳಿಂದ ದುಡಿಯುತ್ತಿರುವ ನಿಷ್ಠಾವಂತ ಕಾರ್ಯಕರ್ತರಿಗೆ ನಿಗಮ-ಮಂಡಳಿಗೆ ನೇಮಕ ಸೇರಿದಂತೆ ಸರ್ಕಾರದ ಯಾವುದೇ ನಾಮನಿರ್ದೇಶನ ಸಿಕ್ಕಿಲ್ಲ. ಮೇಲುಕೋಟೆ ಕ್ಷೇತ್ರದಲ್ಲಿ ನಾಯಕತ್ವದ ಕೊರತೆ ಇದೆ. ಯಾವೊಬ್ಬ ನಾಯಕರು ಸರಿಯಾದ ಹಾದಿಯಲ್ಲಿ ಕಾರ್ಯಕರ್ತರನ್ನು ಕೊಂಡೊಯ್ಯುವ ಕೆಲಸ ಮಾಡುತ್ತಿಲ್ಲ. ಪಕ್ಷದ ಸಭೆ-ಸಮಾರಂಭಗಳಿಗೆ ಯಾವುದೇ ಮಾಹಿತಿ ನೀಡುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಕೃಷ್ಣೇಗೌಡ, ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಸಿ.ಆರ್.ರಮೇಶ್, ವಿಶ್ರಾಂತ ಪ್ರಾಂಶುಪಾಲ ಡಿ.ಕೆ.ದೇವೇಗೌಡ, ಪುರಸಭೆ ಮಾಜಿ ಅಧ್ಯಕ್ಷ ಡಿ.ಹುಚ್ಚೇಗೌಡ, ಮಾಜಿ ಸದಸ್ಯರಾದ ಕೆ.ಉಮಾಶಂಕರ್, ಜಯಲಕ್ಷ್ಮೀ, ಗ್ಯಾರಂಟಿ ಯೋಜನೆ ಪ್ರಾಧಿಕಾರದ ನಿರ್ದೇಶಕರಾದ ಸಿದ್ದಲಿಂಗಯ್ಯ, ಸಿ.ಎಂ.ಶ್ರೀಕಾಂತ್, ಚಿಕ್ಕಬ್ಯಾಡರಹಳ್ಳಿ ಧರ್ಮಣ್ಣ, ಅಸಂಘಟಿತ ಕಾರ್ಮಿಕ ವಿಭಾಗದ ಅಧ್ಯಕ್ಷ ಸತ್ಯೇಂದ್ರಕುಮಾರ್, ಸಾಮಾಜಿಕ ಜಾಲತಾಣದ ವನರಾಜು, ಕಾಂಗ್ರೆಸ್  ಮುಖಂಡರಾದ ಸಿ.ಎಂ.ಮಹೇಶ್, ಕ್ಯಾತನಹಳ್ಳಿ ಕೃಷ್ಣೇಗೌಡ, ಚಿಕ್ಕಾಡೆ ಮೋಹನ್, ಚಿನಕುರಳಿ ಭಾಸ್ಕರ್, ಲಿಂಗಾಪುರ ಸ್ವಾಮಿಗೌಡ ಇತರರು ಇದ್ದರು.