ಶ್ರೀರಂಗಪಟ್ಟಣ ತಾಲೂಕು ಕಚೇರಿ ಎದುರು ಭೂಮಿತಾಯಿ ಹೋರಾಟ ಸಮಿತಿ ಕಾರ್ಯಕರ್ತರು ಗಂಟೆ ಚಳವಳಿ ನಡೆಸಿದರು.
ಶ್ರೀರಂಗಪಟ್ಟಣ: ತಮಿಳುನಾಡಿಗೆ 4.5 ಟಿಎಂಸಿ ನೀರು ಹರಿಸಲು ಆದೇಶಿಸಿರುವ ಸಿಡಬ್ಲ್ಯುಆರ್‌ಸಿ ಆದೇಶ ವಿರೋಧಿಸಿ ಭೂಮಿತಾಯಿ ಹೋರಾಟ ಸಮಿತಿ ಕಾರ್ಯಕರ್ತರು ಗಂಟೆ ಚಳವಳಿ ನಡೆಸಿದರು.
ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ತಾಲೂಕು ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ಆಗಮಿಸಿದ ಕಾರ್ಯಕರ್ತರು ಬಳಿಕ ಧರಣಿ ಕುಳಿತು ಗಂಟೆ ಬಾರಿಸುತ್ತಾ ಆಕ್ರೋಶ ವ್ಯಕ್ತಪಡಿಸಿದರು.
ರೈತ ನಾಯಕ ಕೆ.ಎಸ್.ನಂಜುಂಡೇಗೌಡ ಮಾತನಾಡಿ, ರಾಜ್ಯ ಸರ್ಕಾರಗಳ ವೈಫಲ್ಯದ ಪ್ರತಿಫಲವೇ ಇಂದಿನ ಸಮಸ್ಯೆಗೆ ಕಾರಣವಾಗಿದೆ. ಇನ್ನಾದರೂ ರಾಜ್ಯ ಸರ್ಕಾರ ದ್ವಿಮುಖ ನೀತಿ ಬಿಟ್ಟು ಸ್ವಾಭಿಮಾನ ಸಾಧಿಸಿ ನೀರು ಉಳಿಸಿಕೊಂಡು ನಾಡಿನ ಹಿತ ಕಾಯಬೇಕು ಎಂದು ಆಗ್ರಹಿಸಿದರು.
ಭೂಮಿತಾಯಿ ಹೋರಾಟ ಸಮಿತಿ ಅಧ್ಯಕ್ಷ ಬಿ.ಸಿ.ಕೃಷ್ಣೇಗೌಡ, ಉಪಾಧ್ಯಕ್ಷ ಜಯರಾಮೇಗೌಡ, ಪ್ರಧಾನ ಕಾರ್ಯದರ್ಶಿ ಎಂ.ವಿ.ಕೃಷ್ಣ, ಖಜಾಂಚಿ ಮಹದೇವು, ಮುಖಂಡರಾದ ಹೆಬ್ಬಾಡಿಹುಂಡಿ ಸಿದ್ದೇಗೌಡ, ಅಚ್ಚಪ್ಪನಕೊಪ್ಪಲು, ರವಿ ಲಕ್ಷ್ಮಣ, ಡಿ.ಮಂಜುನಾಥ್, ಕಪರನಕೊಪ್ಪಲು ಸುರೇಶ್, ಮಹೇಶ್, ದೊಡ್ಡೇಗೌಡನಕೊಪ್ಪಲು ರವಿ, ಕೆಂಪೇಗೌಡ, ರಾಮಕೃಷ್ಣ ಭಾಗವಹಿಸಿದ್ದರು.