ಮದ್ದೂರಿನ ಶಿವಪುರದಲ್ಲಿ ಗುರುವಾರ 2025-26ನೇ ಸಾಲಿನ ತಾಲೂಕು ಪಂಚಾಯಿತಿ ರಾಜ್ಯ ಹಣಕಾಸು ಯೋಜನೆಯಡಿಯಲ್ಲಿ ಶೇ.5 ರ ಅನುದಾನದಲ್ಲಿ ಕೊಪ್ಪ ಹೋಬಳಿಯ ಇಬ್ಬರು ಅಂಗವಿಕಲರಿಗೆ ವಿದ್ಯುತ್ ಚಾಲಿತ ದ್ವಿಚಕ್ರ ವಾಹನಗಳನ್ನು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ವಿತರಿಸಿದರು. ಕೆ.ಎನ್.ದಿವಾಕರ್, ಕದಲೂರು ರಾಮಕೃಷ್ಣ, ಕೆ.ಆರ್.ಮಹೇಶ್, ಜೋಗಿಗೌಡ, ಮಂಜುನಾಥ್, ಎಸ್.ಸಿ.ರಮೇಶ್ ಇದ್ದರು. 
ಮಂಡ್ಯ

ಸರ್ಕಾರದ ಸೌಲಭ್ಯಗಳನ್ನು ಬಳಸಿಕೊಂಡು ಮುಖ್ಯವಾಹಿನಿಗೆ ಬರಲಿ

ಎಂ.ರವಿ

ಸಚಿವ ಎನ್.ಚಲುವರಾಯಸ್ವಾಮಿ ಸಲಹೆ

ಮದ್ದೂರು: ಅಂಗವಿಕಲರು ಸರ್ಕಾರದ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಸಮಾಜದ ಮುಖ್ಯವಾಹಿನಿಗೆ ಬರಬೇಕೆಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.
ನಗರದ ಶಿವಪುರದಲ್ಲಿ ಗುರುವಾರ 2025-26ನೇ ಸಾಲಿನ ತಾಲೂಕು ಪಂಚಾಯಿತಿ ರಾಜ್ಯ ಹಣಕಾಸು ಯೋಜನೆಯಡಿಯಲ್ಲಿ ಶೇ. 5 ರ ಅನುದಾನದಲ್ಲಿ ಕೊಪ್ಪ ಹೋಬಳಿಯ ಇಬ್ಬರು ಅಂಗವಿಕಲರಿಗೆ ವಿದ್ಯುತ್ ಚಾಲಿತ ದ್ವಿಚಕ್ರ ವಾಹನ ವಿತರಣೆ ಮಾಡಿ ಮಾತನಾಡಿದರು.
ಸರ್ಕಾರ ಅಂಗವಿಕಲರಿಗೆ ಸಾಕಷ್ಟು ಅನುದಾನಗಳನ್ನು ನೀಡುತ್ತಿದೆ. ತ್ರಿಚಕ್ರ ಸೈಕಲ್, ದ್ವಿಚಕ್ರ ವಾಹನ, ಇತರ ಅಗತ್ಯ ಸಲಕರಣೆಗಳು ಸೇರಿದಂತೆ ಹಲವು ರೀತಿಯಲ್ಲಿ ಸವಲತ್ತುಗಳನ್ನು ನೀಡುತ್ತಿದ್ದು, ಇವುಗಳನ್ನು ಬಳಸಿಕೊಂಡು ಉತ್ತಮ ಜೀವನ ರೂಪಿಸಿಕೊಳ್ಳಬೇಕೆಂದರು.
ಅಂಗವಿಕಲರಲ್ಲಿ ಆಗಾಧವಾದ ಪ್ರತಿಭೆಯಿದ್ದು, ನಿರಂತರವಾಗಿ ಪರಿಶ್ರಮಟ್ಟು ಹಲವರು ರಾಷ್ಟ್ರ ಮತ್ತು ಅಂತಾರಾಷ್ಟ್ರಿಯ ಮಟ್ಟದಲ್ಲಿ ಸಾಧನೆ ಮಾಡಿ ತೋರಿಸಿದ್ದಾರೆ. ಇಂತವರನ್ನು ಆದರ್ಶವಾಗಿಟ್ಟು ಉನ್ನತ ಮಟ್ಟದ ಸಾಧನೆ ಮಾಡಬೇಕೆಂದು ಕಿವಿಮಾತು ಹೇಳಿದರು.
ನಾಗಮಂಗಲ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎನ್.ದಿವಾಕರ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಕೆ.ಸಿ.ಜೋಗಿಗೌಡ, ಮನ್‌ಮುಲ್ ಮಾಜಿ ಅಧ್ಯಕ್ಷ ಕದಲೂರು ರಾಮಕೃಷ್ಣ, ತಾಪಂ ಮಾಜಿ ಸದಸ್ಯ ಕೆ.ಆರ್.ಮಹೇಶ್, ಪುರಸಭಾ ಮಾಜಿ ಅಧ್ಯಕ್ಷ ಎಂ.ಪಿ.ಅಮರ್‌ಬಾಬು, ನರೇಗಾ ಸಹಾಯಕ ನಿರ್ದೇಶಕ ಮಂಜುನಾಥ್, ಸರ್ವೋದಯ ಅಂಗವಿಕಲರ ಸಂಘದ ಅಧ್ಯಕ್ಷ ಎಸ್.ಸಿ.ರಮೇಶ್, ಮುಖಂಡರಾದ ಚಿಕ್ಕೊನಹಳ್ಳಿ ತಿಮ್ಮಯ್ಯ, ತಗ್ಗಳ್ಳಿ ಚಂದ್ರು, ಆನಂದ್, ಸ್ವಾಮಿ ಇದ್ದರು.