ಕೆಆರ್‌ಎಸ್‌ನ ಬೃಂದಾವನದಲ್ಲಿರುವ ಕರ್ನಾಟಕ ಇಂಜಿನಿಯರಿಂಗ್ ಸಂಶೋಧನಾ ಕೇಂದ್ರ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸ್ಪರ್ಧಾ ವಿಜೇತ ಸರ್ಕಾರಿ ನೌಕರರಿಗೆ ಬಹುಮಾನ ವಿತರಿಸಲಾಯಿತು. 
ಮಂಡ್ಯ

ಸರ್ಕಾರಿ ನೌಕರರು ಕನ್ನಡವನ್ನು ಹೆಚ್ಚು ಬಳಕೆ ಮಾಡಲಿ

ಅಭಿನಯ್ ಎಚ್.ಎಂ

ಪ್ರಮುಖ ಮುಖ್ಯಾಂಶಗಳು

  • ಕೃಷ್ಣರಾಜಸಾಗರ ಅಣೆಕಟ್ಟೆಯ ಯೋಜನಾ ಶಾಖೆ
  • ಸರ್ಕಾರಿ ನೌಕರರ ಸಂಘ
  • ಬೃಂದಾವನದಲ್ಲಿರುವ ಕರ್ನಾಟಕ ಇಂಜಿನಿಯರಿಂಗ್ ಸಂಶೋಧನಾ ಕೇಂದ್ರ ಸಭಾಂಗಣ
  • ಕನ್ನಡ ರಾಜ್ಯೋತ್ಸವ
ಕೆ.ಆರ್.ಸಾಗರ: ಕೃಷ್ಣರಾಜಸಾಗರ ಅಣೆಕಟ್ಟೆಯ ಯೋಜನಾ ಶಾಖೆಯ ಸರ್ಕಾರಿ ನೌಕರರ ಸಂಘದ ವತಿಯಿಂದ ಇತ್ತೀಚೆಗೆ ಬೃಂದಾವನದಲ್ಲಿರುವ ಕರ್ನಾಟಕ ಇಂಜಿನಿಯರಿಂಗ್ ಸಂಶೋಧನಾ ಕೇಂದ್ರ ಸಭಾಂಗಣದಲ್ಲಿ ಕನ್ನಡ ರಾಜ್ಯೋತ್ಸವ ಆಯೋಜಿಸಲಾಗಿತ್ತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕರ್ನಾಟಕ ಇಂಜಿನಿರಿಂಗ್ ಸಂಶೋಧನಾ ಕೇಂದ್ರದ ನಿರ್ದೇಶಕ ಕೆ.ಜೆ.ಮಹೇಶ್, ನಮ್ಮ ಮಾತೃ, ಆಡಳಿತ ಭಾಷೆ ಕನ್ನಡವಾಗಿದೆ. ಆದರೂ ನಮ್ಮ ಆಡಳಿತದಲ್ಲಿ ಇಂಗ್ಲಿಷ್ ಪದಗಳ ಬಳಕೆ ಹೇರಳವಾಗಿದೆ. ಕನ್ನಡ ಭಾಷೆಗೆ ಇತಿಹಾಸ ದೊಡ್ಡದಿದ್ದು, ಸರ್ಕಾರಿ ನೌಕರರಾದ ನಾವುಗಳು ಸಂಪೂರ್ಣವಾಗಿ ಕನ್ನಡ ಭಾಷೆಯನ್ನು ಹೆಚ್ಚು ಬಳಕೆ ಮಾಡಬೇಕು. ಜತೆಗೆ ಕಡತಗಳು ಕನ್ನಡ ಭಾಷೆಯಿಂದ ಕೂಡಿರಬೇಕು ಎಂದರು.
ಕಾರ್ಯಕ್ರಮದ ಅಂಗವಾಗಿ ಆಯೋಜಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ವಿಜೇತರಾದ ಸರ್ಕಾರಿ ನೌಕರರಿಗೆ ಬಹುಮಾನ ವಿತರಣೆ ಮಾಡಲಾಯಿತು. ಕನ್ನಡ ಭಾಷೆ ಕುರಿತು ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಪ್ರಬಂಧ ಸ್ಪರ್ಧೆ ವಿಜೇತರಾತದವರಿಗೆ ಬಹುಮಾನ ವಿತರಣೆ ಮಾಡಲಾಯಿತು.
ಕರ್ನಾಟಕ ಇಂಜಿನಿರಿಂಗ್ ಸಂಶೋಧನಾ ಕೇಂದ್ರದ ಸಿಆರ್‌ಒ ಗೀರಿಶ್, ಕಾವೇರಿ ನೀರಾವರಿ ನಿಗಮದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಶಿವಪ್ರಸಾದ್, ಕೆ.ಆರ್.ಸಾಗರ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ನಿಂಗರಾಜು, ಕೃಷ್ಣರಾಜಸಾಗರ ಅಣೆಕಟ್ಟೆಯ ಯೋಜನಾ ಶಾಖೆಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಶಿವಪ್ಪ, ಕಾರ್ಯದರ್ಶಿ ಜಯಪ್ರಕಾಶ್, ಖಾಚಾಂಚಿ ಜಶ್ವಂತ್ ಇತರರಿದ್ದರು.