ಮದ್ದೂರು ತಾಲೂಕು ದುಂಡನಹಳ್ಳಿಯಲ್ಲಿ 65 ಲಕ್ಷ ರೂ.ವೆಚ್ಚದಲ್ಲಿ ಆಯುಷ್ಮಾನ್ ಆರೋಗ್ಯ ಮಂದಿರ ನಿರ್ಮಾಣ ಕಾಮಗಾರಿಗೆ ಶಾಸಕ ಕೆ.ಎಂ.ಉದಯ್ ಭೂಮಿಪೂಜೆ ನೆರವೇರಿಸಿದರು. ಕದಲೂರು ರಾಮಕೃಷ್ಣ, ಕೆ.ದಾಸೇಗೌಡ, ಹರೀಶ್‌ಬಾಬು, ಚಲುವರಾಜು, ಸಿಪಾಯಿ ಶ್ರೀನಿವಾಸ್ ಇದ್ದರು.
ಮದ್ದೂರು: ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಉತ್ತಮ ಆರೋಗ್ಯವಿದ್ದರೆ ಮಾತ್ರ ನೆಮ್ಮದಿ ಜೀವನ ಸಾಗಿಸಲು ಸಾಧ್ಯ ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು.
ತಾಲೂಕಿನ ದುಂಡನಹಳ್ಳಿಯಲ್ಲಿ 65 ಲಕ್ಷ ರೂ. ವೆಚ್ಚದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಂಜೂರಾಗಿರುವ ಆಯುಷ್ಮಾನ್ ಆರೋಗ್ಯ ಮಂದಿರ ನಿರ್ಮಾಣ ಕಾಮಗಾರಿಗೆ ಮಂಗಳವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿ, ಗ್ರಾಮಸ್ಥರಿಗೆ ಸ್ಥಳೀಯವಾಗಿಯೇ ಉತ್ತಮ ಗುಣಮಟ್ಟದ ವೈದ್ಯಕೀಯ ಸೇವೆ ಸಿಗಬೇಕು ಎಂಬ ಉದ್ದೇಶದಿಂದ ಆರೋಗ್ಯ ಮಂದಿರ ನಿರ್ಮಿಸಲಾಗುತ್ತಿದೆ. ಶೀಘ್ರ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದರು.
ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಚಲುವರಾಜು, ಮುನ್‌ಮುಲ್ ನಿರ್ದೇಶಕ ಹರೀಶ್‌ಬಾಬು, ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕದಲೂರು ರಾಮಕೃಷ್ಣ, ಮುಖಂಡರಾದ ಕೆಸ್ತೂರು ಕೆ.ದಾಸೇಗೌಡ, ಸಿಪಾಯಿ ಶ್ರೀನಿವಾಸ್, ನವೀನ್, ತಿಮ್ಮಯ್ಯ, ಶಂಕರೇಗೌಡ, ಟಿಎಚ್‌ಒ ರವಿಶಂಕರ್ ಇದ್ದರು.