ಮೃತ ವೈಶಾಲಿ  
ಮಂಡ್ಯ

ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆ

ಕೆ.ಆರ್.ಸಾಗರ : ಬೆಳಗೊಳ ಗ್ರಾಮದಲ್ಲಿ ಗೃಹಿಣಿಯೊಬ್ಬಳು ತನ್ನ ತವರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಬೆಳಗೊಳ ಗ್ರಾಮದ ನಿವಾಸಿ ವರಹಸ್ವಾಮಿ ಅವರ ಮಗಳು ವೈಶಾಲಿ(22) ಮೃತ ಗೃಹಿಣಿ. ಎರಡು ವರ್ಷಗಳ ಹಿಂದೆ ಮೈಸೂರಿನ ಕುಂಬಾರಕೊಪ್ಪಲು ನಿವಾಸಿ ಕಿರಣ್ ಅವರನ್ನು ಮದುವೆಯಾಗಿದ್ದರು. ದಂಪತಿ ನಡುವೆ ಕೌಟುಂಬಿಕ ಕಲಹ ಆಗುತ್ತಿದ್ದ ಹಿನ್ನೆಲೆಯಲ್ಲಿ ಕಳೆದ ಒಂದು ವರ್ಷದಿಂದ ತವರು ಮನೆಯಲ್ಲೇ ವಾಸವಾಗಿದ್ದ ವೈಶಾಲಿ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದಳು ಎನ್ನಲಾಗಿದೆ. ಭಾನುವಾರ ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಮೃತಳ ತಂದೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಕೆ.ಆರ್.ಸಾಗರ ಪೊಲೀಸರು ಶವವನ್ನು ಮೈಸೂರು ಕೆ.ಆರ್.ಆಸ್ಪತ್ರೆ ಶವಾಗಾರಕ್ಕೆ ಸಾಗಿಸಿದ್ದಾರೆ.