ಕೆ.ಎಂ.ದೊಡ್ಡಿಯ ಸಮುದಾಯ ಆರೋಗ್ಯ ಕೇಂದ್ರದ ಆವರಣದಲ್ಲಿ ಸ್ಫೂರ್ತಿ ಲಯನ್ಸ್ ಸಂಸ್ಥೆ ವತಿಯಿಂದ ಹಸಿವು-ಆರೈಕೆ ಕಾರ್ಯಕ್ರಮಕ್ಕೆ ಭಾರತೀನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ, ಜಿ.ಪಂ. ಮಾಜಿ ಸದಸ್ಯ ಎ.ಎಸ್.ರಾಜೀವ್ ಚಾಲನೆ ನೀಡಿದರು. ಬಿ.ಬಸವರಾಜು, ಸುಧಾ, ಕೆ.ಎಲ್.ಶಿವರಾಮು ಇತರರು ಇದ್ದರು.
ಕೆ.ಎಂ.ದೊಡ್ಡಿ: ಹಸಿವು-ಆರೈಕೆ ಕಾರ್ಯಕ್ರಮದಿಂದ ಆಸ್ಪತ್ರೆಗೆ ಬರುವ ರೋಗಿಗಳಿಗೆ ಅನುಕೂಲವಾಗಲಿದೆ ಎಂದು ಭಾರತೀನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ, ಜಿ.ಪಂ. ಮಾಜಿ ಸದಸ್ಯ ಎ.ಎಸ್.ರಾಜೀವ್ ಅಭಿಪ್ರಾಯಪಟ್ಟರು.
ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದ ಆವರಣದಲ್ಲಿ ಸ್ಫೂರ್ತಿ ಲಯನ್ಸ್ ಸಂಸ್ಥೆ ವತಿಯಿಂದ ಹಸಿವು-ಆರೈಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಆಸ್ಪತ್ರೆಗೆ ಬರುವ ರೋಗಿಗಳು ಸೇರಿದಂತೆ ಬಾಣಂತಿಯರಿಗೆ ಹಸಿವು ನೀಗಿಸುವ ಕಾರ್ಯಕ್ರಮ ನೆರವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ದೂರದ ಹಳ್ಳಿಗಳಿಂದ ಚಿಕಿತ್ಸೆ ಪಡೆಯಲು ಬಂದು ಹಸಿವಿನಿಂದ ಬಳಲುವವರಿಗೆ ಸ್ಪೂರ್ತಿ ಲಯನ್ಸ್ ಸಂಸ್ಥೆ ಹಸಿವು-ಆರೈಕೆ ಕಾರ್ಯಕ್ರಮ ಹಮ್ಮಿಕೊಂಡಿರುವುದು ಶ್ಲಾಘನೀಯ ಕೆಲಸ ಎಂದರು.
ಆಸ್ಪತ್ರೆಯಲ್ಲಿ ದಾಖಲಾದವರಿಗೆ ಯಾವುದೇ ಊಟದ ವ್ಯವಸ್ಥೆ ಇಲ್ಲದಿರುವುದನ್ನು ಗಮನಿಸಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸಂಘ, ಸಂಸ್ಥೆಗಳು, ದಾನಿಗಳು, ಸಮಾಜ ಸೇವಕರು, ಉಳ್ಳವರು. ಉದ್ಯಮಿಗಳು ಕೈ ಜೋಡಿಸಿದರೆ ಪ್ರತಿದಿನ ಈ ತರಹ ಕಾರ್ಯಕ್ರಮವನ್ನು ಹಮ್ಮಿಕೊಳ್ಳಬಹುದು ಎಂದು ಹೇಳಿದರು.
ಹಸಿದವರಿಗೆ ಅನ್ನ ನೀಡಿದ ಆತ್ಮ ತೃಪ್ತಿ ಸಿಗುತ್ತದೆ. ಈ ನಿಟ್ಟಿನಲ್ಲಿ ಎಲ್ಲರೂ ಇಂತಹ ಮಹತ್ತರ ಕಾರ್ಯಕ್ರಮಗಳಿಗೆ ನೆರವಾಗುವ ಮೂಲಕ ಹಸಿದವರ ಹೊಟ್ಟೆ ತುಂಬಿಸುವ ಕಾರ್ಯವನ್ನು ಶ್ರದ್ಧೆಯಿಂದ ಮಾಡಬೇಕು ಎಂದರು.
ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ, ಜಿ.ಪಂ. ಮಾಜಿ ಅಧ್ಯಕ್ಷ ಬಿ.ಬಸವರಾಜು, ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಸುಧಾ, ಸ್ಫೂರ್ತಿ ಲಯನ್ಸ್ ಸಂಸ್ಥೆಯ ಅಧ್ಯಕ್ಷ ಕೆ.ಎಲ್.ಶಿವರಾಮು, ಪ್ರಧಾನ ಕಾರ್ಯದರ್ಶಿ ಬಿ.ಎಸ್. ಬೋರೇಗೌಡ, ರಕ್ಷ ಸಮಿತಿಯ ಸದಸ್ಯ ತೊರೆಬೊಮ್ಮನಹಳ್ಳಿ ಸಿದ್ದರಾಮೇಗೌಡ, ಪದಾಧಿಕಾರಿಗಳಾದ ವಕ್ರತುಂಡ ವೆಂಕಟೇಶ್, ಚನ್ನಶೆಟ್ಟಿ, ಗಿರೀಶ್, ದೇವರಾಜು, ಸತೀಶ್, ಮಂಜು, ವೆಂಕಟೇಶ್ ಸೋಮ ಮತ್ತಿತರರು ಇದ್ದರು.