ಹಲಗೂರು ಗ್ರಾಮ ಪಂಚಾಯಿತಿ ಕಚೇರಿ ಮತ್ತು ರಾಜೀವ್ ಗಾಂಧಿ ಸೇವಾ ಕೇಂದ್ರದ ನೂತನ ಕಟ್ಟಡವನ್ನು ಶಾಸಕ ಪಿ.ಎಂ.ನರೇಂದ್ರಸ್ವಾಮಿ ಉದ್ಘಾಟಿಸಿದರು. ಗುಲ್ನಾಜ್ ಭಾನು, ಉಪಾಧ್ಯಕ್ಷೆ ಲತಾ, ಚೆಂದಿಲ್, ಆನಂದ್ ಇತರರು ಇದ್ದರು. 
ಮಂಡ್ಯ

ಹಲಗೂರು ಗ್ರಾಮ ಪಂಚಾಯಿತಿ ಕಟ್ಟಡ ಉದ್ಘಾಟನೆ

ಪ್ರಮುಖ ಮುಖ್ಯಾಂಶಗಳು

  • ಶಾಸಕ ಪಿ.ಎಂ.ನರೇಂದ್ರಸ್ವಾಮಿ ಲೋಕಾರ್ಪಣೆ
  • 99 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ
ಹಲಗೂರು: ಇಲ್ಲಿನ ರಾಷ್ಟ್ರೀಯ ಹೆದ್ದಾರಿಯ ಮುತ್ತತ್ತಿ ಸರ್ಕಲ್‌ನಲ್ಲಿ ನೂತನವಾಗಿ ಹಲಗೂರು ಗ್ರಾಮ ಪಂಚಾಯಿತಿ ಕಚೇರಿ ಮತ್ತು ರಾಜೀವ್ ಗಾಂಧಿ ಸೇವಾ ಕೇಂದ್ರದ ನೂತನ ಕಟ್ಟಡವನ್ನು ಗುರುವಾರ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಪಿ.ಎಂ.ನರೇಂದ್ರಸ್ವಾಮಿ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ನರೇಗಾ ಮತ್ತು ರಾಜೀವ್ ಗಾಂಧಿ ಸಶಸ್ತ್ರೀಕರಣ ಯೋಜನೆ ಅಡಿ 99 ಲಕ್ಷ ರೂ. ವೆಚ್ಚದಲ್ಲಿ ಸುಸಜ್ಜಿತವಾದ ಕಟ್ಟಡ ನಿರ್ಮಿಸಲಾಗಿದೆ. ಬಹು ದಿನಗಳಿಂದ ಸ್ವಂತ ಗ್ರಾಮ ಪಂಚಾಯಿತಿ ಕಟ್ಟಡದ ಕೊರತೆಯಿಂದ ಕ್ಷೇತ್ರ ಸಂಪನ್ಮೂಲ ಕೇಂದ್ರದ ಕಟ್ಟಡದಲ್ಲಿ ತಾತ್ಕಾಲಿಕವಾಗಿ ಪಂಚಾಯಿತಿ ಕಾರ್ಯ ಚಟುವಟಿಕೆಗಳು ನಡೆಯುತ್ತಿದ್ದು, ಇದೀಗ ನೂತನ ಕಟ್ಟಡ ಲೋಕಾರ್ಪಣೆಗೊಂಡಿರುವುದು ಸಂತಸ ತಂದಿದ್ದು, ಇದರ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ಶಾಸಕರಿಗೆ ಅವರ ಅಭಿಮಾನಿಗಳು ಸನ್ಮಾನಿಸಿ ಅಭಿನಂದಿಸಿದರು. ಪಕ್ಷದ ಕಾರ್ಯಕರ್ತರು ಮತ್ತು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗುಲ್ನಾಜ್ ಭಾನು, ಉಪಾಧ್ಯಕ್ಷೆ ಲತಾ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಚೆಂದಿಲ್, ಕಾರ್ಯದರ್ಶಿ ಶಿವಕುಮಾರ್, ಬಿಲ್ ಕಲೆಕ್ಟರ್ ಆನಂದ್, ಗ್ರಂಥಾಲಯ ಪಾಲಕ ಶಿವನಂಜು, ಅಟೆಂಡರ್ ರಾಜಣ್ಣ ಇತರರು ಇದ್ದರು.