ಮಂಡ್ಯ ನಗರದಲ್ಲಿ ಕಂದಾಯ ನೌಕರರ ಸಂಘದ ಕಟ್ಟಡ ಲೋಕಾರ್ಪಣೆ ಸಮಾರಂಭ ಆಯೋಜಿಸಲಾಗಿತ್ತು.  
ಮಂಡ್ಯ

ನೌಕರರು ನಿಷ್ಠೆಯಿಂದ ಕರ್ತವ್ಯ ನಿರ್ವಹಿಸಿ: ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿಕೆ

ಪ್ರಮುಖ ಮುಖ್ಯಾಂಶಗಳು

  • ಕಂದಾಯ ನೌಕರರ ಸಂಘದ ಕಟ್ಟಡ ಲೋಕಾರ್ಪಣೆ
  • ಕೆಂಗೇರಿ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ಡಾ.ನಿಶ್ಚಲಾನಂದನಾಥ ಸ್ವಾಮೀಜಿ ಸಾನಿಧ್ಯ
ಮಂಡ್ಯ: ಕಂದಾಯ ಇಲಾಖೆ ನೌಕರರು ನಿಷ್ಠೆಯಿಂದ ಕರ್ತವ್ಯ ನಿರ್ವಹಿಸುವ ಮೂಲಕ ಜಿಲ್ಲೆಯ ಅಭಿವೃದ್ದಿಗೆ ಶ್ರಮಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಮೀಪ ಕಂದಾಯ ನೌಕರರ ಸಂಘದ ಕಟ್ಟಡವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ಕಂದಾಯ ನೌಕರರ ಸಂಘದ ನಿವೃತ್ತ ನೌಕರರ ಗೃಹ ನಿರ್ಮಾಣ ಕಟ್ಟಡ ಬೃಹತ್ ಕಟ್ಟಡವಾಗಿ ನಿರ್ಮಾಣವಾಗಿದೆ. ಕಂದಾಯ ಇಲಾಖೆ ನೌಕರರ ಸಮಸ್ಯೆಯನ್ನು ಬಗೆಹರಿಸಲು ಬೃಹತ್ ಕಟ್ಟಡ ನಿರ್ಮಾಣ ಆಗಿದ್ದು, ನೌಕರರು ಸದುಪಯೋಗಪಡಿಸಿಕೊಳ್ಳಿ. ಕಂದಾಯ ಇಲಾಖೆಯ ನೌಕರರು ಮತ್ತು ನಿವೃತ್ತ ನೌಕರರಿಗೆ ಶುಭ ಹಾರೈಸಿದರು.
ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ ಮಾತನಾಡಿ, ನೌಕರರ ಪರಿಶ್ರಮದಿಂದ ಈ ಕಟ್ಟಡ ನಿರ್ಮಾಣವಾಗಿದೆ. ನಿವೃತ್ತಿ ಹೊಂದಿರುವ ನೌಕರರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಕಟ್ಟಡ ನಿರ್ಮಾಣ ಮಾಡಲಾಗಿದೆ. ಜಿಲ್ಲೆಯಲ್ಲಿ ಎಲ್ಲ ಕಂದಾಯ ಇಲಾಖೆಯ ನೌಕರರು ನಿಷ್ಠೆಯಿಂದ ಕೆಲಸ ಮಾಡಬೇಕು. ಜಿಲ್ಲೆಯ ಅಭಿವೃದ್ಧಿಗೆ ಸಹಕರಿಸಬೇಕು ಎಂದು ತಿಳಿಸಿದರು.
ಕೆಂಗೇರಿ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ಡಾ.ನಿಶ್ಚಲಾನಂದನಾಥ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು. ಪಾಂಡವಪುರ ಉಪವಿಭಾಗಾಧಿಕಾರಿ ಶ್ರೀನಿವಾಸ್, ಕಂದಾಯ ಇಲಾಖೆ ನೌಕರ ಸಂಘದ ಜಿಲ್ಲಾಧ್ಯಕ್ಷ ಡಿ.ತಮ್ಮಣ್ಣಗೌಡ, ಉದ್ಯಮಿ ವಿಜಯ ರಾಮೇಗೌಡ ಇತರರಿದ್ದರು.