ಗೆಜ್ಜಲಗೆರೆ ಗ್ರಾಮ ಪಂಚಾಯಿತಿ ಆವರಣದಲ್ಲಿ ಗ್ರಾಮಸ್ಥರು ಹಾಗೂ ಮಹಿಳೆಯರು ಅಹೋರಾತ್ರಿ ಧರಣಿ ನಡೆಸಿದರು. ಸುನಂದಾ ಜಯರಾಮು, ಜಿ.ಪಿ.ಯೋಗೇಶ್, ಚಂದ್ರಶೇಖರ್, ವೀರಪ್ಪ ಇದ್ದರು. 
ಮಂಡ್ಯ

67ನೇ ದಿನಕ್ಕೆ ಕಾಲಿಟ್ಟ ಅನಿರ್ದಿಷ್ಟಾವಧಿ ಧರಣಿ

ಅಭಿನಯ್ ಎಚ್.ಎಂ

ಪ್ರಮುಖ ಮುಖ್ಯಾಂಶಗಳು

  • ಗೆಜ್ಜಲಗೆರೆ ಗ್ರಾಮ ಪಂಚಾಯಿತಿ
  • ನಗರಸಭೆಗೆ ಸೇರ್ಪಡೆ ಮಾಡಿರುವುದನ್ನು ವಿರೋಧಿಸಿ
ಮದ್ದೂರು: ಗೆಜ್ಜಲಗೆರೆ ಗ್ರಾಮ ಪಂಚಾಯಿತಿಯನ್ನು ನಗರಸಭೆಗೆ ಸೇರ್ಪಡೆ ಮಾಡಿರುವುದನ್ನು ವಿರೋಧಿಸಿ ಗೆಜ್ಜಲಗೆರೆ ಗ್ರಾಮ ಪಂಚಾಯಿತಿ ಆವರಣದಲ್ಲಿ ಗ್ರಾಮಸ್ಥರು ನಡೆಯುತ್ತಿರುವ ಅನಿರ್ದಿಷ್ಟಾವಧಿ ಧರಣಿ ಗುರುವಾರ 66 ದಿನ ಪೂರೈಸಿದೆ.
ಪ್ರತಿಭಟನೆ ನೇತೃತ್ವ ವಹಿಸಿರುವ ರೈತ ನಾಯಕಿ ಸುನಂದಾ ಜಯರಾಮು ಮಾತನಾಡಿ, 65 ದಿನಗಳಿಂದ ನಿರಂತರವಾಗಿ ಧರಣಿ ನಡೆಯುತ್ತಿದ್ದರೂ ಸರ್ಕಾರ ಹಾಗೂ ಜಿಲ್ಲಾಡಳಿತ ಹೋರಾಟವನ್ನು ಗಂಭೀರವಾಗಿ ಪರಿಗಣಿಸಿಲ್ಲ. ಜತೆಗೆ ಪಂಚಾಯಿತಿಗಳನ್ನು ಪಂಚಾಯಿತಿಯಾಗೆ ಉಳಿಸಲು ಕ್ರಮ ಕೈಗೊಂಡಿಲ್ಲ ಎಂದರು.
ಗೆಜ್ಜಲಗೆರೆ ಗ್ರಾಪಂ ವ್ಯಾಪ್ತಿಯಲ್ಲಿರುವ ದಾಖಲೆ ಹಾಗೂ ಕಡತಗಳನ್ನು ಅಧಿಕಾರಿಗಳು ಯಾವುದೇ ಕಾರಣಕ್ಕೂ ಹೊರಗಡೆಗೆ ತೆಗೆದುಕೊಂಡು ಹೋಗಲು ಬಿಡುವುದಿಲ್ಲ. ಪಂಚಾಯಿತಿ ಆವರಣದಲ್ಲಿ ಬುಧವಾರದಿಂದ ಅಹೋರಾತ್ರಿ ಧರಣಿ ಮುಂದುವರಿಸಲು ಗ್ರಾಮಸ್ಥರು, ಮಹಿಳೆಯರು ತೀರ್ಮಾನಿಸಿದ್ದಾರೆ ಎಂದರು.
ಮದ್ದೂರು ನಗರಸಭೆಯಿಂದ ಗೆಜ್ಜಲಗೆರೆ, ಗೊರವನಹಳ್ಳಿ, ಸೋಮನಹಳ್ಳಿ ಹಾಗೂ ಚಾಮನಹಳ್ಳಿ ಗ್ರಾಪಂಗಳನ್ನು ಕೈ ಬಿಡುವವರೆಗೂ ನಿರಂತರವಾಗಿ ಧರಣಿ ಮುಷ್ಕರ ಮುಂದುವರಿಯಲಿದೆ ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ತಾಪಂ ಮಾಜಿ ಅಧ್ಯಕ್ಷ ಜಿ.ಪಿ.ಯೋಗೇಶ್, ಮುಖಂಡರಾದ ಚಂದ್ರಶೇಖರ್, ಮೋಹನ, ವೀರಪ್ಪ, ಪ್ರಕಾಶ್, ಮಂಜುನಾಥ್, ಸತ್ಯವತಿ, ಗೌರಮ್ಮ, ಶಾಂತಮ್ಮ, ಯೋಗೇಶ್ ಇತರರಿದ್ದರು.