ಅಣ್ಣೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಆಲಭುಜನಹಳ್ಳಿಯಲ್ಲಿ ಕೂಲಿ ಕಾರ್ಮಿಕರಿಗೆ ವಿಬಿ ಜಿ ರಾಮ್ ಜಿ ಹಾಗೂ ಜಾಬ್ ಕಾರ್ಡ್ ಮೇಳ ದ ಬಗ್ಗೆ ಮಾಹಿತಿ ನೀಡಲಾಯಿತು. 
ಮಂಡ್ಯ

ಕೂಲಿ ಕಾರ್ಮಿಕರಿಗೆ ವಿಬಿ ಜಿ ರಾಮ್ ಜಿ ಮಾಹಿತಿ

ಪ್ರಜ್ವಲ್.ಎನ್

ಕೆ.ಎಂ.ದೊಡ್ಡಿ:

ಜಿಲ್ಲಾದ್ಯಂತ ಹಮ್ಮಿಕೊಂಡಿರುವ ಜಾಬ್ ಕಾರ್ಡ್ ಮೇಳ ಅಂಗವಾಗಿ ಸಮೀಪದ ಅಣ್ಣೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಲಭುಜನಹಳ್ಳಿಯಲ್ಲಿ ಕೂಲಿ ಕಾರ್ಮಿಕರಿಗೆ ವಿಬಿ ಜಿ ರಾಮ್ ಜಿ ಹಾಗೂ ಜಾಬ್ ಕಾರ್ಡ್ ಮೇಳದ ಬಗ್ಗೆ ಮಾಹಿತಿ ನೀಡಲಾಯಿತು.

ಅಭಿಯಾನದಲ್ಲಿ ಸಕ್ರಿಯವಲ್ಲದ ಕುಟುಂಬಗಳ ಪಟ್ಟಿ ಸಿದ್ಧಪಡಿಸಿಕೊಂಡು ಪ್ರತಿ ಮನೆಗೆ ಭೇಟಿ ನೀಡಿ ಜಾಗೃತಿ ಮೂಡಿಸುವ ಜತೆಗೆ ಜಾಬ್ ಕಾರ್ಡ್ ಮೇಳದ ಕುರಿತು ಗ್ರಾಮ ಪಂಚಾಯತಿ ಮಟ್ಟದಲ್ಲಿ ಡಂಗೂರ ಸಾರುವುದು, ಸ್ವಚ್ಛತಾ ವಾಹನಗಳಲ್ಲಿ ಜಿಂಗಲ್ಸ್ ಗಳ ಮೂಲಕ ಜಾಗೃತಿ ಸಂದೇಶಗಳನ್ನು ಸಾರುವ ಮೂಲಕ ವ್ಯಾಪಕ ಪ್ರಚಾರ ಮಾಡಲಾಯಿತು.
ಜಾಬ್ ಕಾರ್ಡ್ ಇಲ್ಲದ ಕುಟುಂಬಗಳು ಗ್ರಾಮ ಪಂಚಾಯಿತಿಗಳಲ್ಲಿ ನಮೂನೆ-01 ಪಡೆದು ಭರ್ತಿ ಮಾಡಿ ಇ-ಕೆವೈಸಿ ಆದ ಬ್ಯಾಂಕ್ ಪುಸ್ತಕ, ಆಧಾರ್, ರೇಷನ್ ಕಾರ್ಡ್ ನಕಲು ಪ್ರತಿ ಹಾಗೂ ಎರಡು ಭಾವಚಿತ್ರ ನೀಡಿ ಹೊಸ ಗ್ರಾಮೀಣ ರೋಜ್ಗಾರ್ ಗ್ಯಾರಂಟಿ ಕಾರ್ಡ್ ಪಡೆಯಬಹುದು ಎಂದು ತಿಳಿಸಲಾಯಿತು.
ಆ.15 ರಿಂದ ಸೆ.15ರವರೆಗೆ ತಾಲೂಕಿನ ಎಲ್ಲ ಗ್ರಾಮ ಪಂಚಾಯಿತಿಗಳಲ್ಲೂ ಜಾಬ್ ಕಾರ್ಡ್ ಮೇಳದ ಬಗ್ಗೆ ಕೂಲಿ ಕಾರ್ಮಿಕರಿಗೆ ಜಾಗೃತಿ ಮೂಡಿಸಲು ಅಭಿಯಾನ ಕೈಗೊಳ್ಳಲಾಗಿದೆ. ವಿಬಿ ಜಿ ರಾಮ್ ಜಿ ಯೋಜನೆ ಬಗ್ಗೆ ಕೂಲಿ ಕಾರ್ಮಿಕರಿಗೆ ಅರಿವು ಮೂಡಿಸಿ ಜಾಬ್ ಕಾರ್ಡ್ ಮಾಡಿಸುವಂತೆ ತಿಳಿ ಹೇಳಲಾಗುತ್ತಿದೆ. ಅಲ್ಲದೆ ಪಂಚಾಯಿತಿ ವತಿಯಿಂದ ಜಾಗೃತಿ, ವ್ಯಾಪಕ ಪ್ರಚಾರ ಕೈಗೊಳ್ಳಲಾಗಿದೆ. ಕೂಲಿ ಕಾರ್ಮಿಕರು ಸಮೀಪದ ಗ್ರಾಪಂಗಳಲ್ಲಿ ಅಗತ್ಯ ದಾಖಲೆಗಳನ್ನು ಸಲ್ಲಿಸಿ ಜಾಬ್ ಕಾರ್ಡ್‌ಗಳನ್ನು ಮಾಡಿಸಿಕೊಳ್ಳಬೇಕು.
ರಾಮಲಿಂಗಯ್ಯ ಮದ್ದೂರು ತಾಲೂಕು ಪಂಚಾಯ್ತಿ ಇಒ.