ಮದ್ದೂರು ತಾಲೂಕಿನ ಮಾಲಗಾರನಹಳ್ಳಿ ನಡೆದ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಕಾರ್ಯಕ್ರಮವನ್ನು ಶಾಸಕ ಕೆ.ಎಂ.ಉದಯ್ ಉದ್ಘಾಟಿಸಿದರು. ಶ್ರೀ ಜ್ಞಾನಪ್ರಕಾಶ ಸ್ವಾಮೀಜಿ, ಡಾ.ಎಸ್.ತುಕಾರಾಂ, ಎಂ.ಟಿ.ಸುರೇಶ್‌ಕಂಠಿ, ಗಂಗಾಧರಸ್ವಾಮಿ, ಸಿ.ಎಂ.ದ್ಯಾವಪ್ಪ, ಕಿರಣ್‌ಕುಮಾರ್, ಶಂಕರಲಿಂಗೇಗೌಡ ಇದ್ದರು.
ಉರಿಲಿಂಗಿಪೆದ್ದಿ ಮಠದ ಶ್ರೀ ಜ್ಞಾನಪ್ರಕಾಶ ಸ್ವಾಮೀಜಿ ಸಲಹೆ
ಮದ್ದೂರು: ಬಾಬಾ ಸಾಹೇಬರನ್ನು ಮೆರವಣಿಗೆ ಮಾಡುವ ಬದಲು ಅವರ ಬರವಣಿಗೆಯನ್ನು ಅರ್ಥೈಸಿಕೊಂಡರೆ ಆಗ ಬಾಬಾ ಸಾಹೇಬರನ್ನು ಜೀವಂತವಾಗಿಟ್ಟಂತೆ ಎಂದು ಮೈಸೂರಿನ ಉರಿಲಿಂಗಿಪೆದ್ದಿ ಮಠದ ಶ್ರೀ ಜ್ಞಾನಪ್ರಕಾಶ ಸ್ವಾಮೀಜಿ ಹೇಳಿದರು.
ತಾಲೂಕಿನ ಮಾಲಗಾರನಹಳ್ಳಿಯಲ್ಲಿ ಜೈ ಭೀಮ್ ಗೆಳೆಯರ ಬಳಗ ಭಾನುವಾರ ರಾತ್ರಿ ಏರ್ಪಡಿಸಿದ್ದ ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತಿ ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಅಭಿನಂದನೆ ಹಾಗೂ ವಿದ್ಯಾರ್ಥಿಗಳಿಗೆ ನೋಟ್‌ಬುಕ್ ವಿತರಣಾ ಸಮಾರಂಭದಲ್ಲಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಎಲ್ಲ ಸಮುದಾಯದ ಗ್ರಾಮದ ಮುಖಂಡರು ವೇದಿಕೆಯಲ್ಲಿದ್ದಾರೆ ಇದು ಅಂಬೇಡ್ಕರ್ ಅವರ ಜೀವಂತಿಕೆಗೆ ಸಾಕ್ಷಿ ಎಂದರು.
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಿದ ಶ್ರೀ ಜ್ಞಾನಪ್ರಕಾಶ ಸ್ವಾಮೀಜಿ ಅವರು ನೀವೆಲ್ಲ ಮುಂದಿನ ದಿನಗಳಲ್ಲಿ ಉನ್ನತ ವಿದ್ಯಾಭ್ಯಾಸ ಮುಗಿಸಿ ಎತ್ತರದ ಸ್ಥಾನ ಪಡೆಯಬೇಕೆಂದು ಮಕ್ಕಳಿಗೆ ಕಿವಿಮಾತು ಹೇಳಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಸಕ ಕೆ.ಎಂ.ಉದಯ್, ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸಿದ ಸಂವಿಧಾನ ವಿಶ್ವದಲ್ಲೇ ಶ್ರೇಷ್ಠ ಎನಿಸಿದೆ. ಇದರಿಂದ ಎಲ್ಲರೂ ಸಮಾನತೆಯಿಂದ ಹಾಗೂ ಸಹಬಾಳ್ವೆಯಿಂದ ಜೀವನ ಮಾಡಲು ಕಾರಣವಾಗಿದೆ. ಇಂತಹ ಮಹಾನ್ ವ್ಯಕ್ತಿಯ ಆದರ್ಶಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ತಿಳಿಸಿದರು.
ಸಂಪನ್ಮೂಲ ವ್ಯಕ್ತಿ ಡಾ.ಎಸ್‌ತುಕಾರಾಂ ಮಾತನಾಡಿ, ಪುಟ್ಟ ಪುಟ್ಟ ಹಳ್ಳಿಗಳಲ್ಲೂ ಇಂತಹ ಕಾರ್ಯಕ್ರಮಗಳು ಜರುಗಿದಾಗ ಅಂಬೇಡ್ಕರ್ ಅವರನ್ನು ನಾವು ಜೀವಂತವಾಗಿಡಲು ಸಾಧ್ಯವಾಗುತ್ತದೆ, ಬಾಬಾ ಸಾಹೇಬರು ಒಂದು ವಿಶ್ವಕೋಶವಿದ್ದಂತೆ ಅವರ ಬಗ್ಗೆ ಐದು ಹತ್ತು ನಿಮಿಷಗಳಲ್ಲಿ ಮಾತನಾಡುವುದು ಅಸಾಧ್ಯ ಎಂದರು.
ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಂ.ಟಿ.ಸುರೇಶ್ ಕಂಠಿ, ಜಿಲ್ಲಾ ಅಪರ ಪೊಲೀಸ್ ವರಿಷ್ಠಾಧಿಕಾರಿ ಗಂಗಾಧರ ಸ್ವಾಮಿ, ಜಿಲ್ಲಾ ಕಾಂಗ್ರೆಸ್ ವಕ್ತಾರ ಸಿ.ಎಂ.ದ್ಯಾವಪ್ಪ, ಜೈ ಭೀಮ್ ಗೆಳೆಯರ ಬಳಗದ ಅಧ್ಯಕ್ಷ ಕಿರಣ್‌ಕುಮಾರ್, ಮುಖಂಡರಾದ ಪ್ರಸನ್ನಕುಮಾರ್, ರಾಜೇಶ್, ದ್ಯಾಪಸಂದ್ರ ಶಂಕರಲಿಂಗೇಗೌಡ ಮತ್ತಿತರರು