ಮಂಡ್ಯ ನಗರದಲ್ಲಿ ಪ್ರಧಾನ ಮಂತ್ರಿ ಭಾರತೀಯ ಜನೌಷಧ ಕೇಂದ್ರವನ್ನು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಲೋಕಾರ್ಪಣೆಗೊಳಿಸಿದರು.  
ಮಂಡ್ಯ

ವಿ.ವಿ ನಗರದಲ್ಲಿ ಜನೌಷಧ ಕೇಂದ್ರ ಲೋಕಾರ್ಪಣೆ: ಸಂಸದ ಯದುವೀರ್ ಕೃಷ್ಣದತ್ತ ಒಡೆಯರ್ ಭಾಗಿ

ಪ್ರಮುಖ ಮುಖ್ಯಾಂಶಗಳು

  • ಶೇ.50 ರಿಂದ 80ರಷ್ಟು ಕಡಿಮೆ ಬೆಲೆ
  • ಕೇಂದ್ರ ಸರ್ಕಾರದ ಒಂದು ಉತ್ತಮ ಕಾರ್ಯಕ್ರಮ
ಮಂಡ್ಯ: ನಗರದ ಕಲ್ಲಹಳ್ಳಿ ವಿ.ವಿ ನಗರದಲ್ಲಿನ ಎಪಿಎಂಸಿ ಮಾರುಕಟ್ಟೆ ಸಮೀಪ ಪ್ರಧಾನ ಮಂತ್ರಿ ಭಾರತೀಯ ಜನೌಷಧ ಕೇಂದ್ರವನ್ನು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಲೋಕಾರ್ಪಣೆಗೊಳಿಸಿದರು.
ಬಳಿಕ ಮಾತನಾಡಿದ ಅವರು, ಪ್ರಧಾನ ಮಂತ್ರಿ ಭಾರತೀಯ ಜನೌಷಧ ಮಳಿಗೆ ಕೇಂದ್ರ ಸರ್ಕಾರದ ಒಂದು ಉತ್ತಮ ಕಾರ್ಯಕ್ರಮ. ಇದು ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಶೇ.50 ರಿಂದ 80ರಷ್ಟು ಕಡಿಮೆ ಬೆಲೆಯಲ್ಲಿ ಅತ್ಯುತ್ತಮ ಗುಣಮಟ್ಟದ ಜೆನೆರಿಕ್ ಔಷಧವನ್ನು ಒದಗಿಸುತ್ತದೆ ಎಂದರು.
ಬಿಜೆಪಿ ಯುವ ನಾಯಕ ಇಂಡುವಾಳು ಸಚ್ಚಿದಾನಂದ ಮಾತನಾಡಿ, ಬಡವರಿಗೆ ಅನುಕೂಲವಾಗಬೇಕೆನುವ ಸದುದ್ದೇಶದಿಂದ ಕೇಂದ್ರ ಸರ್ಕಾರ ಈ ಯೋಜನೆ ಜಾರಿಗೆ ತಂದಿದೆ. ಇಂದಿಗೂ ಎಷ್ಟೋ ಜನರಿಗೆ ಔಷಧ ಖರೀದಿ ಮಾಡಲು ಆರ್ಥಿಕ ಸಮಸ್ಯೆ. ಇಂತಹವರಿಗೆ ಭಾರತೀಯ ಜನೌಷಧ ಕೇಂದ್ರ ನೆರವಾಗಲಿದೆ. ಕೈಗೆಟಕುವ ಬೆಲೆಯಲ್ಲಿ ಗುಣಮಟ್ಟದ 800ಕ್ಕೂ ವಿವಿಧ ಬಗೆಯ ಔಷಧವನ್ನು ಕೇಂದ್ರದಲ್ಲಿ ಪಡೆಯಬಹುದು. ಇದನ್ನು ಎಲ್ಲರೂ ಸದುಪಯೋಗಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಎನ್.ಎಸ್.ಇಂದ್ರೇಶ್, ರೈತ ಮೋರ್ಚಾ ಜಿಲ್ಲಾಧ್ಯಕ್ಷ ಅಶೋಕ್ ಜಯರಾಂ, ರಾಜ್ಯ ಕಾರ್ಯಕಾರಿಣಿ ಸದಸ್ಯ ಡಾ.ಸಿದ್ದರಾಮಯ್ಯ ಇತರರಿದ್ದರು.