ಉದ್ಯೋಗ ಮೇಳ ಪೋಸ್ಟರ್‌ಗಳನ್ನು ಮನ್‌ಮುಲ್ ನಿರ್ದೇಶಕ ಎಸ್.ಪಿ.ಸ್ವಾಮಿ ಬಿಡುಗಡೆಗೊಳಿಸಿದರು. ಸಿ.ಕೆ.ಸತೀಶ್, ಕುಮಾರ್ ಉಪ್ಪಾರ್, ಮಹೇಂದ್ರ ಕುಮಾರ್, ಕಾಂತರಾಜು ಇದ್ದರು. 
ಮಂಡ್ಯ

21 ರಂದು ಬೃಹತ್ ಉದ್ಯೋಗ ಮೇಳ

ಶಿವಶಂಕರ್ ಎಂ. ಹೆಬ್ಬಳ್ಳ

ಪ್ರಮುಖ ಮುಖ್ಯಾಂಶಗಳು

  • ಬೃಹತ್ ಉದ್ಯೋಗ ಮೇಳ
ಮದ್ದೂರು: ಮನ್‌ಮುಲ್ ನಿರ್ದೇಶಕ ಎಸ್.ಪಿ.ಸ್ವಾಮಿ ಅವರ ಹುಟ್ಟುಹಬ್ಬದ ಅಂಗವಾಗಿ ಶ್ರೀನಿಧಿಗೌಡ ಸಾಂಸ್ಕೃತಿಕ ಶೈಕ್ಷಣಿಕ ಟ್ರಸ್ಟ್ ಹಾಗೂ ಅಕ್ಷರ ಫೌಂಡೇಶನ್ ಗ್ರಾಮಾಭಿವೃದ್ಧಿ ಸಂಸ್ಥೆ ವತಿಯಿಂದ ಯುವಜನತೆಗೆ ಉದ್ಯೋಗ ಕಲ್ಪಿಸುವ ಸದುದ್ದೇಶದಿಂದ ಏ.21ರಂದು ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ ಎಂದು ಬಿಜೆಪಿ ತಾಲೂಕು ಅಧ್ಯಕ್ಷ ಸಿ.ಕೆ.ಸತೀಶ್ ತಿಳಿಸಿದರು.
ನಗರದ ಮಳವಳ್ಳಿ ರಸ್ತೆಯಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸೋಮವಾರ ಉದ್ಯೋಗ ಮೇಳದ ಪೋಸ್ಟರ್ ಬಿಡುಗಡೆಗೊಳಿಸಿ ಮಾತನಾಡಿದರು. ನಗರದ ಮಳವಳ್ಳಿ ರಸ್ತೆಯ ಬಿಜೆಪಿ ಕಚೇರಿ ಆವರಣದಲ್ಲಿ ಏ.21 ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಉದ್ಯೋಗ ಮೇಳ ನಡೆಯದ್ದು, ಉದ್ಯೋಗಾಕಾಂಕ್ಷಿಗಳು ಈ ಸುವರ್ಣಾವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಮನವಿ ಮಾಡಿದರು.
ಮನ್ ಮುಲ್ ನಿರ್ದೇಶಕ ಎಸ್.ಪಿ.ಸ್ವಾಮಿ ಮಾತನಾಡಿ, ಉದ್ಯೋಗ ಮೇಳದಲ್ಲಿ ಈಗಾಗಲೇ 50 ಕ್ಕೂ ಹೆಚ್ಚು ಕಂಪನಿಗಳು ಮೇಳದಲ್ಲಿ ಪಾಲ್ಗೊಳ್ಳಲು ನೋಂದಾಯಿಸಿಕೊಂಡಿವೆ. ಈ ಬೃಹತ್ ಮೇಳದಲ್ಲಿ ಬರೋಬ್ಬರಿ 3 ಸಾವಿರಕ್ಕೂ ಹೆಚ್ಚು ಉದ್ಯೋಗಾವಕಾಶಗಳು ಲಭ್ಯವಿರುವುದು ವಿಶೇಷವಾಗಿದೆ ಎಂದರು.
ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೊಮೊ, ಯಾವುದೇ ಪದವಿ ಹಾಗೂ ಸ್ನಾತಕೋತ್ತರ ಪದವಿ ಹಾಗೂ ವಿಶೇಷವಾಗಿ ಅಂಗವಿಕಲರಿಗೂ ಸಹ ಉದ್ಯೋಗಗಳು ಲಭ್ಯವಿದೆ. ಉತ್ಪಾದನಾ ವಲಯ, ಬ್ಯಾಂಕಿಂಗ್, ಮಾರಾಟ, ಮಾಹಿತಿ ತಂತ್ರಜ್ಞಾನ, ಕೈಗಾರಿಕೆ, ಗಾಮೆರ್ಂಟ್ಸ್, ಸೇವಾ ವಲಯ, ಪ್ರವಾಸೋದ್ಯಮ, ಹಣಕಾಸು ಹಾಗೂ ನಿರ್ವಹಣಾ ಕ್ಷೇತ್ರ ಸೇರಿದಂತೆ ಹತ್ತು ಹಲವು ವಿಭಾಗಗಳಲ್ಲಿ ಅಭ್ಯರ್ಥಿಗಳು ತಮ್ಮ ಕೌಶಲಕ್ಕೆ ತಕ್ಕಂತೆ ಉದ್ಯೋಗ ಗಿಟ್ಟಿಸಿಕೊಳ್ಳಬಹುದಾಗಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಸ್ಥಳದಲ್ಲಿಯೇ ನೇಮಕಾತಿ ಪತ್ರವನ್ನು ವಿತರಿಸಲಾಗುವುದು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಮುಖಂಡರಾದ ಕುಮಾರ್ ಉಪ್ಪಾರ್, ಮಹೇಂದ್ರ ಕುಮಾರ್, ಕಾಂತರಾಜು ಇದ್ದರು.