ಮಂಗಳವಾರ ಕಾವೇರಿ ನೀರು ನಿಯಂತ್ರಣ ಮಂಡಳಿ ಸಭೆಯಲ್ಲಿ ಕೆ ಆರ್ ಎಸ್ ನಿಂದ ಪ್ರತಿನಿತ್ಯ 15 ದಿವಸಗಳ ಕಾಲ 12 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಆದೇಶ ಮಾಡಿರುವುದನ್ನು ಖಂಡಿಸಿ ನಗರದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಹಾಗೂ ಕರ್ನಾಟಕ ರಾಜ್ಯ ರೈತ ಸಂಘದಿಂದ ಪ್ರತಿಭಟನೆ ನಡೆಸಲಾಯಿತು. ವಿ.ಸಿ.ಉಮಾಶಂಕರ್, ಸೊ.ಶಿ.ಪ್ರಕಾಶ್, ಎಂ.ಸಿ.ಲಿಂಗರಾಜು, ತಿಪ್ಪೂರು ರಾಜೇಶ್, ಸುನೀಲ್‌ಕುಮಾರ್ ಇದ್ದರು.
ಮದ್ದೂರು: ಕಾವೇರಿ ನೀರು ನಿಯಂತ್ರಣ ಮಂಡಳಿ ಸಭೆಯಲ್ಲಿ ಕೆಆರ್‌ಎಸ್‌ನಿಂದ ಪ್ರತಿನಿತ್ಯ 15 ದಿವಸಗಳ ಕಾಲ 12 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಮಂಗಳವಾರ ಆದೇಶ ಮಾಡಿರುವುದನ್ನು ಖಂಡಿಸಿ ನಗರದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಹಾಗೂ ಕರ್ನಾಟಕ ರಾಜ್ಯ ರೈತ ಸಂಘದಿಂದ ಪ್ರತಿಭಟನೆ ನಡೆಸಲಾಯಿತು.
ವೇದಿಕೆಯ ಜಿಲ್ಲಾಧ್ಯಕ್ಷ ವಿ.ಸಿ.ಉಮಾಶಂಕರ ಮಾತನಾಡಿ, ಕರ್ನಾಟಕಕ್ಕೆ ಪದೇ ಪದೆ ಆಗುತ್ತಿರುವ ಅನ್ಯಾಯ ಖಂಡಿಸಿ ಆ.13ರಂದು ಕನ್ನಡ ಪರ ಸಂಘಟನೆಗಳ ಒಕ್ಕೂಟ ಕರೆದಿರುವ ಕರ್ನಾಟಕ ಬಂದ್ ಬೆಂಬಲಿಸಬೇಕು ಹಾಗೂ ಕಾವೇರಿ ವಿಷಯದಲ್ಲಿ ರಾಜ್ಯಕ್ಕೆ ಆಗಿರುವ ಘನ ಘೋರ ಅನ್ಯಾಯ ಖಂಡಿಸಿ ಜಿಲ್ಲೆಯ ಜನತೆ ಬಂದ್‌ಗೆ ಬೆಂಬಲಿಸಬೇಕು ಮತ್ತು ಮದ್ದೂರು ತಾಲೂಕಿನ ಎಲ್ಲ ಪ್ರಗತಿಪರ ಸಂಘಟನೆಗಳ ಮುಖಂಡರು ಕೈಜೋಡಿಸುವಂತೆ ಮನವಿ ಮಾಡಿದರು.
ಬಂದ್‌ಗೆ ವರ್ತಕರು, ಹೋಟೆಲ್ ಮಾಲೀಕರು, ಕೈಗಾರಿಕೋದ್ಯಮಿಗಳು, ಶಾಲಾ-ಕಾಲೇಜುಗಳ ಮುಖ್ಯಸ್ಥರು, ಬೀದಿ ಬದಿ ವ್ಯಾಪಾರಿಗಳು, ಸಾರ್ವಜನಿಕರು ಇನ್ನೀತರ ಎಲ್ಲ ಖಾಸಗಿ ಸಂಸ್ಥೆಗಳು ಕರ್ನಾಟಕ ಬಂದ್ ಬೆಂಬಲಿಸಲು ಮನವಿ ಮಾಡಿದರು
ಜಿಲ್ಲಾ ರೈತ ಸಂಘ ಪತ್ರಿಕಾ ಕಾರ್ಯದರ್ಶಿ ಸೊ.ಸಿ.ಪ್ರಕಾಶ್, ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ಸಿ.ಲಿಂಗರಾಜು, ತಾಲೂಕು ಅಧ್ಯಕ್ಷ ತಿಪ್ಪೂರು ರಾಜೇಶ್, ಮುಖಂಡರಾದ ವಿ. ಜೆ.ಸುನೀಲ್‌ಕುಮಾರ್, ಕೆ.ಬಿ.ಸಿದ್ದೇಗೌಡ, ರವಿ, ಬೋರೇಗೌಡ, ಶಶಿಕುಮಾರ್ ಮತ್ತು ಸಂಘಟನೆಯ ಮುಖಂಡರು ಹಾಜರಿದ್ದರು.