ಕಸ್ತೂರಿ ಕರ್ನಾಟಕ ಜನಪರ ವೇದಿಕೆ ವತಿಯಿಂದ ಮದ್ದೂರಿನ ತಾಲೂಕು ಕಚೇರಿ ಮುಂದೆ ಶುಕ್ರವಾರ ಪ್ರತಿಭಟನೆ ನಡೆಯಿತು. ವಿ.ಸಿ.ಉಮಾಶಂಕರ, ಸೊ.ಶಿ.ಪ್ರಕಾಶ್, ತಿಪ್ಪೂರು ರಾಜೇಶ್, ಎಂ.ಸಿ.ಲಿಂಗರಾಜು, ಉಮೇಶ್ ಸೇರಿದಂತೆ ಇತರರು ಇದ್ದರು.
- ರಾಜ್ಯದ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಹುದ್ದೆ ಭರ್ತಿ ಮಾಡುವಂತೆ
- ಕನ್ನಡ ಶಾಲೆಗಳನ್ನು ಮುಚ್ಚದಂತೆ
- ಮೇಕೆದಾಟು ಯೋಜನೆ ಶೀಘ್ರವಾಗಿ ಪ್ರಾರಂಭಿಸುವಂತೆ ಆಗ್ರಹಿಸಿ
ಮದ್ದೂರು: ರಾಜ್ಯದ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡುವಂತೆ, ಕನ್ನಡ ಶಾಲೆಗಳನ್ನು ಮುಚ್ಚದಂತೆ ಹಾಗೂ ಮೇಕೆದಾಟು ಯೋಜನೆ ಶೀಘ್ರವಾಗಿ ಪ್ರಾರಂಭಿಸುವಂತೆ ಆಗ್ರಹಿಸಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆಯಿಂದ ನಗರದ ತಾಲೂಕು ಕಚೇರಿ ಮುಂದೆ ಶುಕ್ರವಾರ ಪ್ರತಿಭಟನೆ ನಡೆಯಿತು.
ವೇದಿಕೆ ಜಿಲ್ಲಾಧ್ಯಕ್ಷ ವಿ.ಸಿ.ಉಮಾಶಂಕರ ಮಾತನಾಡಿ, ವಿವಿಧ ಪ್ರಮುಖ ಇಲಾಖೆಗಳಲ್ಲಿ 3.80 ಲಕ್ಷ ಹುದ್ದೆಗಳು ಖಾಲಿಯಿದ್ದು, ಕೃಷಿ ಇಲಾಖೆಯಲ್ಲಿ 6876, ಪಶುಸಂಗೋಪನೆ 11020, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ 8526, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ 6190, ಹಣಕಾಸು ಇಲಾಖೆ 7668, ಮೀನುಗಾರಿಕೆ 838 ಆಹಾರ ಮತ್ತು ನಾಗರಿಕ ಪೂರೈಕೆ 1442, ಅರಣ್ಯ 6478 ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ 37,572, ಉನ್ನತ ಶಿಕ್ಷಣ 13599, ಕಂದಾಯ 10867 ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ 10,504, ಪರಿಶಿಷ್ಟ ಜಾತಿ ಕಲ್ಯಾಣ 9646 ಶಿಕ್ಷಣ 79,694 ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ 3391 ಹುದ್ದೆಗಳು ಖಾಲಿ ಇದ್ದು ಶೀಘ್ರವಾಗಿ ಭರ್ತಿ ಮಾಡುವ ಮೂಲಕ ಜನರಿಗೆ ಸುಲಭವಾಗಿ ಕೆಲಸವಾಗುವಂತೆ ಮಾಡಬೇಕು ಎಂದು ಒತ್ತಾಯಿಸಿದರು.
ಗ್ರಾಮಾಂತರ ಪ್ರದೇಶದಲ್ಲಿ ಕಾಡು ಪ್ರಾಣಿಗಳ ಹಾವಳಿ ತಪ್ಪಿಸುವ ಮೂಲಕ ರೈತರ ಬೆಳೆಗಳನ್ನ ರಕ್ಷಿಸಬೇಕು. ಜತೆಗೆ ಹಾನಿಯಾದ ಬೆಳಗಳಿಗೆ ಸರ್ಕಾರ ವೈಜ್ಞಾನಿಕ ಪರಿಹಾರ ದೊರಕಿಸಿ ಕೊಡುವಂತೆ ಆಗ್ರಹಿಸಿದರು.
ಶಿರಸ್ತೇದಾರ್ ಚಲುವರಾಜು ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು. ವೇದಿಕೆ ತಾಲೂಕು ಅಧ್ಯಕ್ಷ ತಿಪ್ಪೂರು ರಾಜೇಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ಸಿ. ಲಿಂಗರಾಜು, ಜಿಲ್ಲಾ ಉಪಾಧ್ಯಕ್ಷ ಮಹಾಲಿಂಗು, ತಾಲೂಕು ಪ್ರಧಾನ ಕಾರ್ಯದರ್ಶಿ ಸೋಂಪುರ ಉಮೇಶ್, ಸಂಘಟನಾ ಕಾರ್ಯದರ್ಶಿ ಉಮೇಶ್, ಗೌರವಾಧ್ಯಕ್ಷರಾದ ವಿ.ಎಚ್.ಶಿವಲಿಂಗಯ್ಯ, ಆಲೂರು ಚನ್ನಪ್ಪ, ಯುವ ಘಟಕದ ಅಧ್ಯಕ್ಷ ವಿಶ್ವಾಸ್, ಪಟೇಲ್ ಹರೀಶ್, ಎಂ.ವೀರಪ್ಪ ಹಾಗೂ ರೈತ ಮುಖಂಡರಾದ ಸೊ.ಸಿ.ಪ್ರಕಾಶ್, ಕುದುರಗುಂಡಿ ನಾಗರಾಜು, ಕೆ.ಜಿ. ಉಮೇಶ್, ರಾಮಲಿಂಗಯ್ಯ, ವೆಂಕಟೇಶ್, ಲಿಂಗರಾಜು ಇದ್ದರು.