ಮಾಜಿ ಸಂಸದ ದಿವಂಗತ ಜಿ.ಮಾದೇಗೌಡ ಅವರ ಹುಟ್ಟು ಹಬ್ಬದ ಅಂಗವಾಗಿ ಚಾಂಶುಗರ್ಸ್ ಕಾರ್ಖಾನೆ ಆವರಣದಲ್ಲಿರುವ ಚಾಮುಂಡೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆ ನೆರವೇರಿತು.
ಕೆ.ಎಂ.ದೊಡ್ಡಿ: ಮಾಜಿ ಸಂಸದ, ಹಿರಿಯ ಗಾಂಧಿವಾಧಿ, ಭಾರತೀ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ದಿವಂಗತ ಜಿ.ಮಾದೇಗೌಡ ಅವರ ಹುಟ್ಟು ಹಬ್ಬದ ಅಂಗವಾಗಿ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.'
ಇಲ್ಲಿನ ಶ್ರೀ ಚಾಮುಂಡೇಶ್ವರಿ ದೇವಾಲಯ, ಕಾರ್ಕಹಳ್ಳಿಯ ಬಸವೇಶ್ವರ ದೇವಾಲಯ ಮತ್ತು ಹನುಮಂತನಗರದ ಆತ್ಮಲಿಂಗೇಶ್ವರ ದೇವಾಲಯದಲ್ಲಿ ಜಿ.ಮಾದೇಗೌಡ ಅಭಿಮಾನಿಗಳು ಪೂಜಾ ಕಾರ್ಯದಲ್ಲಿ ಭಾಗವಹಿಸಿದ್ದರು.
ಭಾರತೀ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಬಿ.ಎಂ.ನಂಜೇಗೌಡ ಮಾತನಾಡಿ, ಮಾಜಿ ಸಂಸದ ಜಿ.ಮಾದೇಗೌಡ ಅವರು ಹಳ್ಳಿಗಾಡಿನ ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು ಕೆ.ಎಂ.ದೊಡ್ಡಿಯ ಕುಗ್ರಾಮದಲ್ಲಿ ಶಿಕ್ಷಣ ಸಂಸ್ಥೆ ತೆರೆದು ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ರೂಪಿಸಿದ್ದಾರೆ ಎಂದರು.
ರಾಜಕೀಯ, ಶಿಕ್ಷಣ,ಆರೋಗ್ಯ ಮತ್ತು ಧಾರ್ಮಿಕ ಕ್ಷೇತ್ರಗಳಲ್ಲಿ ಗೌಡರ ಸಾಧನೆ ಮರೆಯುವಂತಿಲ್ಲ. ಅವರ ಸಾಧನೆಗಳು ಇಂದಿನ ಯುವ ಪೀಳಿಗೆಗೆ ಮಾದರಿಯಾಗಿದ್ದು, ಅವರು ಹಾಕಿ ಕೊಟ್ಟ ದಾರಿಯಲ್ಲಿ ನಾವು ನಡೆಯೋಣ ಎಂದರು.
ವಿವಿಧ ಅಂಗ ಸಂಸ್ಥೆಗಳ ಮುಖ್ಯಸ್ಥರಾದ ಡಾ.ಎಂ.ಎಸ್.ಮಹದೇವಸ್ವಾಮಿ, ಪ್ರೊ.ಎಸ್.ನಾಗರಾಜು, ಭಾರತೀ ಹೆಲ್ತ್ ಸೈನ್ಸ್‌ಸ್ ನಿರ್ದೇಶಕ ಡಾ.ತಮಿಜ್‌ಮಣಿ, ಡಾ.ಬಿ.ಆರ್.ಚಂದನ್, ಡಾ.ಬಾಲಸುಬ್ರಮಣ್ಯಂ, ಜಿ.ಕೃಷ್ಣ, ಸಿ.ವಿ.ಮಲ್ಲಿಕಾರ್ಜುನ ಆಡಳಿತಾಧಿಕಾರಿ ಜವರೇಗೌಡ, ಜಿ.ಬಿ.ಪಲ್ಲವಿ, ಡಾ.ಮಂಜು ಜೇಕಬ್, ಡಾ.ಶಾಂತಕುಮಾರ್, ಎ.ಎಸ್.ಸಂಜೀವ್, ಕಳ್ಳಿಮೆಳ್ಳೆದೊಡ್ಡಿಪ್ರಸನ್ನ, ಮಂಜುನಾಥ್ ಇತರರಿದ್ದರು.