ಮಂಡ್ಯದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಶಾರದಾ ಮಾತನಾಡಿದರು.
- ನಗರದ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜನೆ
- ಫೆ.13ರಿಂದ 19ರವರೆಗೆ ವಿಶೇಷ ಕಾರ್ಯಕ್ರಮ
ಮಂಡ್ಯ: ಪ್ರಜಾಪಿತ ಬ್ರಹ್ಮ ಕುಮಾರೀಸ್ ಈಶ್ವರೀಯ ವಿಶ್ವ ವಿದ್ಯಾಲಯದ ವತಿಯಿಂದ 90ನೇ ಮಹಾಶಿವರಾತ್ರಿ ಮಹೋತ್ಸವ ಮತ್ತು ಯುವ ಜನೋತ್ಸವ ಕಾರ್ಯಕ್ರಮವನ್ನು ಫೆ.13ರಿಂದ 19ರವರೆಗೆ ಬೆಳಗ್ಗೆ 8ರಿಂದ ರಾತ್ರಿ 9 ಗಂಟೆವರೆಗೆ ನಗರದ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ವಿವಿ ಮುಖ್ಯಸ್ಥೆ ಶಾರದಾ ತಿಳಿಸಿದರು.
ಜನರಲ್ಲಿ ದೇವರ ಆಧ್ಯಾತ್ಮ ಭಾವದ ಆಚರಣೆ ಮಹಾಶಿವರಾತ್ರಿಯ ಅಂಗವಾಗಿ ಕಾರ್ಯಕ್ರಮ ಯೋಜನೆ ಮಾಡಲಾಗಿದೆ. ಏಳು ದಿನ ನಡೆಯಲಿರುವ ಕಾರ್ಯಕ್ರಮದಲ್ಲಿ 21 ಅಡಿ ಎತ್ತರದ ಶಿವಲಿಂಗ, ಭೂಲ್ ಬುಲಯ್ಯ, ಸ್ವರ್ಗ, ಮೈಂಡ್ ಸ್ಪಾ, ಉದ್ಬವಲಿಂಗ, ಸಹಸ್ರಲಿಂಗಗಳು ಆಕರ್ಷಣೆಯಾಗಲಿವೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.
ವಿವಿಯ ವಿಜಯಲಕ್ಷ್ಮೀ ಇದ್ದರು.