ಶಾರದಮ್ಮ 
ಮಂಡ್ಯ

ಕ್ಯಾಂಟರ್ ಡಿಕ್ಕಿಯಾಗಿ ಮಹಿಳೆ ಸಾವು

ಮಳವಳ್ಳಿ: ಪಟ್ಟಣದ ದೊಡ್ಡಕೆರೆ ಬಳಿಯ ಮದ್ದೂರು-ಮಳವಳ್ಳಿ ಮುಖ್ಯರಸ್ತೆಯಲ್ಲಿ ಬುಧವಾರ ರಾತ್ರಿ ಕ್ಯಾಂಟರ್ ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಪಟ್ಟಣದ ಮಡಿವಾಳರ ಬೀದಿಯ ನಿವಾಸಿ ಶಾರದಮ್ಮ(55) ಮೃತರು. ಅಮಾವಾಸ್ಯೆ ಹಿನ್ನೆಲೆಯಲ್ಲಿ ದೊಡ್ಡಣ್ಣ ಎಂಬುವರ ಸ್ಕೂಟರ್‌ನಲ್ಲಿ ಮಹದೇಶ್ವರಕ್ಕೆ ತೆರಳಿದ್ದಾಗ ಹಿಂಬದಿಯಿಂದ ಬಂದ ಕ್ಯಾಂಟರ್ ಡಿಕ್ಕಿ ಹೊಡೆದು ಪರಾರಿಯಾಗಿದೆ.
ಅಪಘಾತದಲ್ಲಿ ಶಾರದಮ್ಮ ಅವರ ತಲೆಗೆ ತೀವ್ರ ಪೆಟ್ಟು ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದು, ಗಾಯಗೊಂಡ ಸ್ಕೂಟರ್ ಸವಾರ ದೊಡ್ಡಣ್ಣ ಅವರನ್ನು ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಮೃತದೇಹವನ್ನು ಪಟ್ಟಣದ ಸಾರ್ವಜನಿಕ ಅಸ್ಪತ್ರೆ ಶವಾಗಾರಕ್ಕೆ ರವಾನಿಸಿದ್ದು, ಅಪಘಾತವೆಸಗಿದ್ದ ಕ್ಯಾಂಟರ್ ವಶಕ್ಕೆ ಪಡೆದು ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.