ಶ್ರೀರಂಗಪಟ್ಟಣದ ರೈಲ್ವೆ ನಿಲ್ದಾಣ ಸಮೀಪ ಗಾಂಜಾ ಮಾರಾಟ ಮಾಡಲು ಯತ್ನಿಸಿದ್ದ ಆರೋಪಿ ಗಂಜಾಂ ರಘು ಎಂಬಾತನನ್ನು ಗಾಂಜಾ ಸಹಿತ ತಾಲೂಕು ಆಡಳಿತದ ಅಧಿಕಾರಿಗಳ ಸಮ್ಮುಖದಲ್ಲಿ ವಶಕ್ಕೆ ಪಡೆಯಲಾಯಿತು. ಇನ್‌ಸ್ಪೆಕ್ಟರ್ ಬಿ.ಜಿ.ಕುಮಾರ್ ಹಾಗೂ ಸಿಬ್ಬಂದಿ ಇದ್ದರು. 
ಮಂಡ್ಯ

ಗಾಂಜಾ ಮಾರಲು ಯತ್ನಿಸುತ್ತಿದ್ದವನ ಬಂಧನ

ಎಂ.ರವಿ
ಶ್ರೀರಂಗಪಟ್ಟಣ: ಪಟ್ಟಣದ ರೈಲ್ವೆ ನಿಲ್ದಾಣ ಸಮೀಪ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ವ್ಯಕ್ತಿಯನ್ನು ಶ್ರೀರಂಗಪಟ್ಟಣ ಟೌನ್ ಠಾಣೆ ಪೊಲೀಸರು ಮಾಲು ಸಮೇತ ವಶಕ್ಕೆ ಪಡೆದು ಬಂಧಿಸಿದ್ದಾರೆ.
ಗಂಜಾಂನ ನಿವಾಸಿ ರಘು (36) ಬಂಧಿತ. ಈತನ ಬಳಿ ಮಾರಾಟ ಮಾಡಲು ಇರಿಸಿಕೊಂಡಿದ್ದ 1.150 ಕೆಜಿಯಷ್ಟು ಹಸಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿ ಪಟ್ಟಣದ ರೈಲ್ವೆ ನಿಲ್ದಾಣ ಸಮೀಪದ ರಾಂಪುರ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಕೆಳ ಸೇತುವೆ ಬಳಿ ಗಾಂಜಾ ಸಮೇತ ನಿಂತಿದ್ದ ವೇಳೆ ಖಚಿತ ಮಾಹಿತಿ ಮೇರೆಗೆ ಶ್ರೀರಂಗಪಟ್ಟಣ ಟೌನ್ ಠಾಣೆ ಇನ್‌ಸ್ಪೆಕ್ಟರ್ ಬಿ.ಜಿ.ಕುಮಾರ್ ಹಾಗೂ ಸಿಬ್ಬಂದಿ ಅಭಿ, ಶ್ರೀನಿವಾಸ್, ಮಂಜು, ದಿಲೀಪ್ ಹಾಗೂ ಸಿದ್ದರಾಜು ಕಾರ್ಯಚರಣೆ ನಡೆಸಿ ಮಾಲು ಸಹಿತ ಬಂಧಿಸಿದರು. ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.