ಅಪಘಾತದಲ್ಲಿ ಮೃತಪಟ್ಟ ನಾರಾಯಣಗೌಡ ಚಿತ್ರ. 
ಮಂಡ್ಯ

ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಸಾವು

ಹಲಗೂರು: ಬೈಕುಗಳ ನಡುವೆ ಇತ್ತೀಚೆಗೆ ಸಂಭವಿಸಿದ್ದ ಅಪಘಾತದಲ್ಲಿ ಗಾಯಗೊಂಡಿದ್ದ ನಾರಾಯಣಗೌಡ (73) ಚಿಕಿತ್ಸೆಗೆ ಸ್ ಸ್ಪಂದಿಸದೆ ಸೋಮವಾರ ಮೃತಪಟ್ಟಿದ್ದಾರೆ.
ಮೂಲತಃ ಕೊನ್ನಾಪುರ ಗ್ರಾಮದ ನಿವಾಸಿ ನಾರಾಯಣಗೌಡ ಕಾರ್ಯನಿಮಿತವಾಗಿ ಮಳವಳ್ಳಿಗೆ ಹೋಗಿ ವಾಪಸ್ ಸ್ವಗ್ರಾಮಕ್ಕೆ ಬೈಕ್‌ನಲ್ಲಿ ಬರುತ್ತಿದ್ದಾಗ ಹಿಂಬದಿಯಿಂದ ಬಂದ ಬೈಕ್ ತೊರೆ ಕಾಡನಹಳ್ಳಿ ಸಮೀಪದ ಕುಂಟನದೊಡ್ಡಿ ಗೇಟ್ ಬಳಿ ಡಿಕ್ಕಿ ಹೊಡೆದಿದೆ. ತೀವ್ರ ಗಾಯಗೊಂಡ ಇವರನ್ನು ತಕ್ಷಣ ಮಳವಳ್ಳಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಹಲಗೂರು ಪೊಲೀಸ್ ಠಾಣೆ ಸಬ್ ಇನ್‌ಸ್ಪೆಕ್ಟರ್ ಲೋಕೇಶ್ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ.