ಜೂಜು ಅಡ್ಡೆಯ ಮೇಲೆ ದಾಳಿ ನಡೆಸಿದ ಹಲಗೂರು ಪೊಲೀಸರು 7 ಜನರನ್ನು ಬಂಧಿಸಿದ್ದಾರೆ. 
ಮಂಡ್ಯ

ಜೂಜು: ಪಣಕ್ಕಿಟ್ಟದ್ದ 22 ಸಾವಿರ ನಗದು ವಶ

ಲೋಕೇಶ್ ಮನು. ಡಿ
ಹಲಗೂರು: ಜೂಜು ಅಡ್ಡೆಯ ಮೇಲೆ ದಾಳಿ ನಡೆಸಿದ ಹಲಗೂರು ಪೊಲೀಸರು 7 ಜನರನ್ನು ಬಂಧಿಸಿದ್ದಾರೆ.
ಸಮೀಪದ ಎನ್.ಹಲಸಹಳ್ಳಿ ಬಳಿಯ ಹೊರವಲಯದಲ್ಲಿ ಜೂಜಾಟದಲ್ಲಿ ತೊಡಗಿದ್ದರು. ಖಚಿತ ಮಾಹಿತಿ ಮೇರೆಗೆ ಭಾನುವಾರ ಸಂಜೆ ಹಲಗೂರು ಸಿಪಿಐ ಬಿ.ಎಸ್.ಶ್ರೀಧರ್ ಮಾರ್ಗದರ್ಶನದಲ್ಲಿ ದಾಳಿ ಮಾಡಿದ ಪಿಎಸ್‌ಐ ಲೋಕೇಶ ಮತ್ತು ಸಿಬ್ಬಂದಿ ಜೂಜಾಟದಲ್ಲಿ ತೊಡಗಿದ್ದ ಏಳು ಜನರನ್ನು ಬಂಧಿಸಿ, ಸವರಿನಂ ಮೊಬೈಲ್‌ಗಳು ಮತ್ತು ಪಣಕ್ಕಿಟ್ಟಿದ್ದ 22 ಸಾವಿರ ರೂ. ನಗದು ವಶಪಡಿಸಿಕೊಂಡಿದ್ದಾರೆ.
ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.