ಹಲಗೂರು: ಡಿ.ಹಲಸಹಳ್ಳಿ ಗೇಟ್ ಬಳಿ ಸೋಮವಾರ ರಾತ್ರಿ ರಸ್ತೆ ದಾಟುತ್ತಿದ್ದ ಪಾದಚಾರಿಗೆ ಬೈಕ್ ಡಿಕ್ಕಿ ಹೊಡೆದ ಅವರು ಸ್ಥಳದಲ್ಲೇ ಮೃತಪಟ್ಟಿದಾರೆ.
ಹಲಗೂರು ಸಮೀಪದ ಬಾಣಸಮುದ್ರ ಗ್ರಾಮದ ನಿವಾಸಿ ನಿಂಗಯ್ಯ ಅವರ ಪುತ್ರ ರವಿಕುಮಾರ್ (48) ಮೃತರು.
ಹಾರೋಹಳ್ಳಿ ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡುತ್ತಿದ್ದ ಇವರು ಕೆಲಸ ಮುಗಿಸಿ ಸ್ವಗ್ರಾಮಕ್ಕೆ ತೆರಳಲು ಡಿ.ಹಲಸಹಳ್ಳಿ ಗೇಟ್‌ನಲ್ಲಿ ರಸ್ತೆ ದಾಟುತ್ತಿದ್ದಾಗ ಮಳವಳ್ಳಿ ಕಡೆಯಿಂದ ಬಂದ ಬೈಕ್ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ತೀವ್ರ ಗಾಯಗೊಂಡ ರವಿಕುಮಾರ್ ಸ್ಥಳದಲ್ಲೇ ಅಸುನೀಗಿದ್ದಾರೆ. ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.