ಮಂಡ್ಯದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಂಡ್ಯ ಕೃಷಿಕ್ ಸರ್ವೋದಯ ಟ್ರಸ್ಟ್ ಸಂಘಟನಾ ಕಾರ್ಯದರ್ಶಿ ಡಿ.ಎಸ್.ದೇವರಾಜು ಮಾತನಾಡಿದರು.
- ಆ.15ರಿಂದ 3 ತಿಂಗಳು ಕೆಎಎಸ್ ಮತ್ತು ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ
- ಅಣಕು ಪರೀಕ್ಷೆ, ಗುಣಮಟ್ಟದ ಅಧ್ಯಯನ ಸಾಮಗ್ರಿ, ಪ್ರಚಲಿತ ವಿದ್ಯಮಾನಗಳ ವಿಶ್ಲೇಷಣೆ ಮತ್ತು ವೈಯಕ್ತಿಕ ಮಾರ್ಗದರ್ಶನ
ಮಂಡ್ಯ: ಮಂಡ್ಯ ಕೃಷಿಕ್ ಸರ್ವೋದಯ ಟ್ರಸ್ಟ್‌ನಿಂದ ಆ.15ರಿಂದ 3 ತಿಂಗಳು ಕೆಎಎಸ್ ಮತ್ತು ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ ನೀಡಲಾಗುವುದು ಎಂದು ಟ್ರಸ್ಟ್ ಸಂಘಟನಾ ಕಾರ್ಯದರ್ಶಿ ಡಿ.ಎಸ್.ದೇವರಾಜು ತಿಳಿಸಿದರು.
ಕರ್ನಾಟಕ ಗೆಜೆಟೆಡ್ ಪ್ರೋಬೇಷನರಿ ಎ ಮತ್ತು ಬಿ ವೃಂದದ 319 ಹುದ್ದೆ ಭರ್ತಿ ಮಾಡಲು ಕರ್ನಾಟಕ ಲೋಕಸೇವಾ ಆಯೋಗ ಜು.31ರಂದು ಅಧಿಸೂಚನೆ ಹೊರಡಿಸಿದೆ. ಪೂರ್ವಭಾವಿ ಪರೀಕ್ಷೆ ನಡೆಸಲು ನ.15ರಂದು ತಾತ್ಕಾಲಿಕ ವೇಳಾಪಟ್ಟಿ ನಿಗದಿಪಡಿಸಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಪೂರ್ವಭಾವಿ ಪರೀಕ್ಷೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆ.31 ಕೊನೆಯ ದಿನವಾಗಿದೆ. ಮಂಡ್ಯ ನಗರದ ಕೃಷಿಕ್ ಸರ್ವೋದಯ ತರಬೇತಿ ಕೇಂದ್ರದಲ್ಲಿ ಜಿಲ್ಲೆಯ ಗ್ರಾಮೀಣ ಅಭ್ಯರ್ಥಿಗಳಿಗೆ ಕಡಿಮೆ ವೆಚ್ಚದಲ್ಲಿ ತರಬೇತಿ ನೀಡಲಾಗುವುದು. ತರಬೇತಿಯಲ್ಲಿ ಅಣಕು ಪರೀಕ್ಷೆ, ಗುಣಮಟ್ಟದ ಅಧ್ಯಯನ ಸಾಮಗ್ರಿ, ಪ್ರಚಲಿತ ವಿದ್ಯಮಾನಗಳ ವಿಶ್ಲೇಷಣೆ ಮತ್ತು ವೈಯಕ್ತಿಕ ಮಾರ್ಗದರ್ಶನ ಹಾಗೂ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಪ್ರತ್ಯೇಕ ವಸತಿ ಸಹಿತ ತರಬೇತಿ ಸೌಲಭ್ಯ ಹಾಗೂ ದಿನದ 24 ಗಂಟೆ ಸ್ಟಡಿ ಸೆಂಟರ್ ಸೌಲಭ್ಯ ಒಳಗೊಂಡಿದೆ ಎಂದು ವಿವರಿಸಿದರು.
ಟ್ರಸ್ಟ್ ಖಜಾಂಚಿ ಲೋಕೇಶ್, ವಿಶೇಷ ಸಂಯೋಜಕ ಪ್ರೊ.ಪ್ರಕಾಶ್, ಧರ್ಮದರ್ಶಿ ನಂಜರಾಜ್ ಇದ್ದರು.