ಮದ್ದೂರು ತಾಲೂಕಿನ ಕೊಪ್ಪದಲ್ಲಿ ಮುಸ್ಲಿಮರು ಬಕ್ರೀದ್ ಅಂಗವಾಗಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.
ಮದ್ದೂರು: ನಗರ ಸೇರಿದಂತೆ ತಾಲೂಕಿನಾದ್ಯಂತ ಮುಸ್ಲಿಮರು ಗುರುವಾರ ಸಡಗರ ಸಂಭ್ರಮದಿಂದ ಬಕ್ರೀದ್ ಹಬ್ಬ ಆಚರಿಸಿದರು.
ನಗರದ ಹೊಳೆ ಬೀದಿಯಲ್ಲಿರುವ ಮಸೀದಿಯಿಂದ ನೂರಾರು ಮುಸ್ಲಿಮರು ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮೂಲಕ ಮಳವಳ್ಳಿ ರಸ್ತೆಯಲ್ಲಿ ಇದ್ಗಾ ಮೈದಾನಕ್ಕೆ ಆಗಮಿಸಿ ಸಾಮೂಹಿಕ ಪ್ರಾರ್ಥನೆ ಮಾಡಿದರು.
ಈ ವೇಳೆ ಮುಸ್ಲಿಮರು ಹೊಸ ವಸ್ತ್ರಗಳನ್ನು ತೊಟ್ಟು, ಒಬ್ಬರಿಗೊಬ್ಬರು ತಬ್ಬಿಕೊಂಡು ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು. ಮದ್ದೂರು, ಕೊಪ್ಪ, ಕೆಸ್ತೂರು, ನಿಡಘಟ್ಟ, ಬೆಸಗರಹಳ್ಳಿ ಸೇರಿದಂತೆ ಇನ್ನಿತರ ಕಡೆಗಳಲ್ಲಿ ಮುಸ್ಲಿಮರು ಸಡಗರ ಸಂಭ್ರಮದಿಂದ ಬಕ್ರೀದ್ ಅಚರಣೆ ಮಾಡಿದರು.