ರಥ ಸಪ್ತಮಿ ಅಂಗವಾಗಿ ಮದ್ದೂರು ನಗರದ ಪುರಾಣ ಪ್ರಸಿದ್ಧ ಶ್ರೀ ನರಸಿಂಹಸ್ವಾಮಿ ದೇಗುಲದಲ್ಲಿ ಸೂರ್ಯಮಂಡಲ ಉತ್ಸವ ಸಡಗರ ಸಂಭ್ರಮದಿಂದ ಭಕ್ತಾದಿಗಳ ಸಮ್ಮುಖದಲ್ಲಿ ನೆರವೇರಿತು. 
ಮಂಡ್ಯ

ಶ್ರೀ ನರಸಿಂಹಸ್ವಾಮಿ ದೇಗುಲದಲ್ಲಿ ವಿಶೇಷ ಪೂಜೆ

ಮದ್ದೂರು: ರಥ ಸಪ್ತಮಿ ಅಂಗವಾಗಿ ನಗರದ ಪುರಾಣ ಪ್ರಸಿದ್ಧ ಶ್ರೀ ನರಸಿಂಹಸ್ವಾಮಿ ದೇಗುಲದಲ್ಲಿ ಭಾನುವಾರ ವಿಶೇಷ ಪೂಜಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.
ಮುಂಜಾನೆ ಹಾಗೂ ಸಂಜೆ ದೇಗುಲದ ಆವರಣದಲ್ಲಿ ಸೂರ್ಯಮಂಡಲ ಉತ್ಸವ ನೂರಾರು ಭಕ್ತಾದಿಗಳ ಸಮ್ಮುಖದಲ್ಲಿ ಸಂಭ್ರಮದಿಂದ ನೆರವೇರಿತು. ದೇಗುಲದ ಆವರಣದಿಂದ ಕೋಟೆ ಬೀದಿ ಸುತ್ತ ಒಂದು ಸುತ್ತು ಉತ್ಸವ ಮಾಡಲಾಯಿತು.
ಜಿಲ್ಲೆ ಹಾಗೂ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ಭಕ್ತಾದಿಗಳು ಉತ್ಸವದಲ್ಲಿ ಪಾಲ್ಗೊಂಡು ದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ಭಕ್ತ ಭಾವ ಮೆರೆದರು. ಆಗಮಿಸಿದ್ದ ಭಕ್ತಾದಿಗಳಿಗೆ ಅನ್ನಸಂತರ್ಪಣೆ ಮಾಡಲಾಯಿತು.