ಪಾಂಡವಪುರ ತಾಲ್ಲೂಕು ಕನಗನಮರಡಿ ಗ್ರಾಮದ ಶ್ರೀಅಂಕನಾಥೇಶ್ವರ ದೇವಸ್ಥಾನದ ಬಳಿ ಸಭೆ ಏರ್ಪಡಿಸಲಾಗಿತ್ತು. ನಡೆಸಿದ ಸಿ.ಪಿ.ಶಿವರಾಜು ಅವರು ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಆಗಮಿಸಬೇಕೆಂದು ಮನವಿ ಮಾಡಿದರು. 
ಮಂಡ್ಯ

ಜನರೊಂದಿಗೆ ಜನತಾದಳ ಕಾರ್ಯಕ್ರಮ 7ಕ್ಕೆ

ಎ. ಆರ್. ರಘುರಾಮ
ಪಾಂಡವಪುರ: ಪಟ್ಟಣದಲ್ಲಿ ಮೇ 7ರಂದು ನಡೆಯಲಿರುವ ಜನರೊಂದಿಗೆ ಜನತಾದಳ ಹಾಗೂ ಜೆಡಿಎಸ್ ಪಕ್ಷದ 25ನೇ ವರ್ಷದ ಬೆಳ್ಳಿಹಬ್ಬದ ಕಾರ್ಯಕ್ರಮ ಹಿನ್ನೆಲೆಯಲ್ಲಿ ಜೆಡಿಎಸ್ ಯುವ ನಾಯಕ ಸಿ.ಪಿ.ಶಿವರಾಜ್ ಅವರು ತಾಲೂಕಿನ ಕನಗನಮರಡಿ ಗ್ರಾಪಂ ವ್ಯಾಪ್ತಿ ಜೆಡಿಎಸ್ ಕಾರ್ಯಕರ್ತರ ಸಭೆ ನಡೆಸಿದರು.
ಕನಗನಮರಡಿ ಗ್ರಾಮದ ಶ್ರೀಅಂಕನಾಥೇಶ್ವರ ದೇವಸ್ಥಾನದ ಬಳಿ ಸಭೆ ನಡೆಸಿದ ಸಿ.ಪಿ.ಶಿವರಾಜು ಅವರು ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಆಗಮಿಸಬೇಕೆಂದು ಮನವಿ ಮಾಡಿದರು.
ಸಿ.ಪಿ.ಶಿವರಾಜು ಮಾತನಾಡಿ, ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹಾಗೂ ಕ್ಷೇತ್ರದ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಅವರ ನೇತೃತ್ವದಲ್ಲಿ ಮೇ 7ರಂದು ಜನರೊಂದಿಗೆ ಜನತಾದಳ ಹಾಗೂ ಜೆಡಿಎಸ್ ಪಕ್ಷದ 25ನೇ ವರ್ಷದ ಬೆಳ್ಳಿಹಬ್ಬ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಪಾಂಡವ ಕ್ರೀಡಾಂಗಣದ ಮುಂಭಾಗ ಬೃಹತ್ ವೇದಿಕೆ ನಿರ್ಮಿಸಲಾಗಿದ್ದು, ಕಾರ್ಯಕ್ರಮದ ಅಂಗವಾಗಿ ಅಂದು ಬೆಳಗ್ಗೆ 10 ಗಂಟೆಗೆ ಪಾಂಡವಪುರ ಪಟ್ಟಣದ ಮಂಡ್ಯ ಸರ್ಕಲ್‌ನಿಂದ ತೆರೆದ ವಾಹನದಲ್ಲಿ ಅದ್ದೂರಿ ಮೆರವಣಿಗೆ ನಡೆಸುವ ಮೂಲಕ ವೇದಿಕೆಗೆ ಕರೆತರಲಾಗುವುದು ಎಂದರು.
ಸಭೆಯಲ್ಲಿ ಕನಗನಮರಡಿ ಗ್ರಾಪಂ ವ್ಯಾಪ್ತಿಯ ಎಲ್ಲ ಜೆಡಿಎಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಜರಿದ್ದರು.
=======