ಮಳವಳ್ಳಿ ಪಟ್ಟಣದಲ್ಲಿ ನಡೆಯುತ್ತಿರುವ ಶಿವರಾತ್ರೀಶ್ವರ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಬುಧವಾರದ ವೇದಿಕೆ ಕಾರ್ಯಕ್ರಮವನ್ನು ನ್ಯಾಯಮೂರ್ತಿ ಎಲ್.ನಾರಾಯಣಸ್ವಾಮಿ ಉದ್ಘಾಟಿಸಿದರು. ಡಾ.ಕೆ.ಅನ್ನದಾನಿ ಶ್ರೀ ದೇಶಿಕೇಂದ್ರ ಸ್ವಾಮೀಜಿ, ಶ್ರೀಚನ್ನಬಸಸ್ವಾಮೀಜಿ, ಶ್ರೀಮಹಂತಸ್ವಾಮೀಜಿ, ಶ್ರೀಜ್ಞಾನಪ್ರಕಾಶ ಸ್ವಾಮೀಜಿ, ಶಿವಾನಂದಪುರಿ ಸ್ವಾಮೀಜಿ, ಶಾಸಕ ಪಿ.ಎಂ.ನರೇಂದ್ರಸ್ವಾಮಿ, ವಿಧಾನ ಪರಿಷತ್ ಮಾಜಿ ಸದಸ್ಯ ಮರಿತಿಬ್ಬೇಗೌಡ, ಜಿಲ್ಲಾಧಿಕಾರಿ ಕುಮಾರ, ಜಿಲ್ಲಾ ಪೊಲೀಸ್ ವರೀಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಜಿಪಂ ಸಿಇಒ ಕೆ.ಆರ್.ನಂದಿನಿ ಇದ್ದರು. 
ಮಂಡ್ಯ

nauguration of lecture, exhibition shop

ಮಳವಳ್ಳಿ: ಪಟ್ಟಣದಲ್ಲಿ ನಡೆಯುತ್ತಿರುವ ಸುತ್ತೂರು ಶಿವರಾತ್ರೀಶ್ವರ ಶಿವಯೋಗಿಗಳ 1066 ನೇ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಬುಧವಾರ ಹಿರಿಯ ಪತ್ರಕರ್ತ ವಿಶ್ವೇಶ್ವರ ಭಟ್ ಭಾರತೀಯ ಸಂಸ್ಕೃತಿಯ ಮೌಲ್ಯಗಳು ವಿಷಯ ಕುರಿತು ಉಪನ್ಯಾಸ ನೀಡಿದರು.
ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದ ವೇದಿಕೆ ಕಾರ್ಯಕ್ರಮವನ್ನು ನ್ಯಾಯಮೂರ್ತಿ ಎಲ್. ನಾರಾಯಣಸ್ವಾಮಿ ಉದ್ಘಾಟಿಸಿದರು. ಮಾಜಿ ಶಾಸಕ ಡಾ.ಕೆ.ಅನ್ನದಾನಿ ಅಧ್ಯಕ್ಷತೆ ವಹಿಸಿದ್ದರು. ಕನಕಪುರ ದೇಗುಲ ಮಠದ ಶ್ರೀ ಚನ್ನಬಸ ಸ್ವಾಮೀಜಿ, ಗುರುಮಲ್ಲೇಶ್ವರ ದಾಸೋಹ ಮಠದ ಶ್ರೀ ಮಹಂತ ಸ್ವಾಮೀಜಿ, ಉರಿಲಿಂಗ ಪೆದ್ದಿ ಮಠದ ಶ್ರೀ ಜ್ಞಾನಪ್ರಕಾಶ ಸ್ವಾಮೀಜಿ, ಕಾಗಿನೆಲೆ ಶಾಖಾ ಮಠದ ಶ್ರೀ ಶಿವಾನಂದಪುರಿ ಸ್ವಾಮೀಜಿ, ಶಾಸಕ ಪಿ.ಎಂ.ನರೇಂದ್ರಸ್ವಾಮಿ, ವಿಧಾನಪರಿಷತ್ ಮಾಜಿ ಸದಸ್ಯ ಮರಿತಿಬ್ಬೇಗೌಡ, ಕೆ.ಎಸ್‌ಟಿಡಿಸಿ ಅಧ್ಯಕ್ಷ ಎಂ.ಶ್ರೀನಿವಾಸ್, ಜಿಲ್ಲಾಧಿಕಾರಿ ಕುಮಾರ, ಜಿಲ್ಲಾ ಪೊಲೀಸ್ ವರೀಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಜಿಪಂ ಸಿಇಒ ಕೆ.ಆರ್.ನಂದಿನಿ ಹಲವು ಮಠಾಧೀಶರು ಉಪಸ್ಥಿತರಿದ್ದರು.
ಇದಕ್ಕೂ ಮೊದಲು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ವಸ್ತುಪ್ರದರ್ಶನ ಮಳಿಗೆ ಉದ್ಘಾಟನೆ ಮಾಡಿದರು.