ಹುಲಿಕೆರೆ ಗ್ರಾಮದ ಕೆ.ಆರ್.ಸಾಗರ ರಸ್ತೆಯಲ್ಲಿರುವ ಬಿಜಿಎಸ್ ಬಾಲಜಗತ್ ಶಾಲೆಯಲ್ಲಿ ಸರಸ್ವತಿ ಪೂಜಾ ಮತ್ತು ಯು.ಕೆ.ಜಿ ಮಕ್ಕಳಿಗೆ ಪದವಿ ಪ್ರದಾನ ಕಾರ್ಯಕ್ರಮದಲ್ಲಿ ಗಣ್ಯರು ಭಾಗವಹಿಸಿದ್ದರು. ಶ್ರೀ ಸೋಮೇಶ್ವರನಾಥ ಸ್ವಾಮೀಜಿ, ಲಿಂಗೇಶ್, ವಿ.ಆಶಾ, ಶಾಲಾ ಶಿಕ್ಷಕರು, ಸಿಬ್ಬಂದಿ ಇದ್ದರು. 
ಮಂಡ್ಯ

ಮಕ್ಕಳ ಚಟುವಟಿಕೆ ಗಮನಿಸಿ ಪ್ರೋತ್ಸಾಹಿಸಿ

ಕೆ.ಆರ್.ಸಾಗರ: ಹುಲಿಕೆರೆ ಗ್ರಾಮದ ಕೆ.ಆರ್.ಸಾಗರ ರಸ್ತೆಯಲ್ಲಿರುವ ಬಿಜಿಎಸ್ ಬಾಲಜಗತ್ ಶಾಲೆಯಲ್ಲಿ ಸರಸ್ವತಿ ಪೂಜೆ ಹಾಗೂ ಯುಕೆಜಿ ಮಕ್ಕಳಿಗೆ ಪದವಿ ಪ್ರದಾನ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.
ಶಾಲಾ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಶ್ರೀ ಆದಿಚುಂಚನಗಿರಿ ಮೈಸೂರು ಶಾಖಾ ಮಠದ ಕಾರ್ಯದರ್ಶಿ ಶ್ರೀ ಸೋಮೇಶ್ವರನಾಥ ಸ್ವಾಮೀಜಿ ಸಾನ್ನಿಧ್ಯ ವಹಿಸಿ ಸರಸ್ವತಿ ದೇವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ನಂತರ ಶಾಲೆಯ ಯುಕೆಜಿ ಮಕ್ಕಳಿಗೆ ಪದವಿ ಪ್ರದಾನ ಮಾಡಿದರು.
ನಂತರ ಮಾತನಾಡಿದ ಶ್ರೀಗಳು, ಮಕ್ಕಳಿಗೆ ಪ್ರಾರಂಭದಲ್ಲಿ ಉತ್ತಮ ವಿದ್ಯಾಭ್ಯಾಸ ಕೊಡಿಸುವ ಬಗ್ಗೆ ಇಂದಿನ ಪಾಲಕರು ಮಕ್ಕಳ ಬಾಲ್ಯದ ಚಟುವಟಿಕೆ ಬಗ್ಗೆ ಗಮನಹರಿಸಿ ಪ್ರೋತ್ಸಾಹ ನೀಡಬೇಕು. ಪುಟ್ಟ ಮಕ್ಕಳಿಗೆ ಯಾವುದೇ ಒತ್ತಡವಾಗದಂತೆ ಕಲಿಕೆ ನೀಡುವ ಶಿಕ್ಷಕರ ಜತೆಗೆ ಪಾಲಕರ ಪಾತ್ರ ಮಹತ್ವದಾಗಿದೆ ಎಂದರು.
ಶಾಲಾ ಕ್ರೀಡಾ ಚಟುವಟಿಕೆ ಹಾಗೂ ಸಾಂಸ್ಕೃತಿಕ ಚಟುವಟಿಕೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಶ್ರೀ ಸೋಮೇಶ್ವರನಾಥ ಸ್ವಾಮೀಜಿ ಪ್ರಶಸ್ತಿ ವಿತರಿಸಿದರು.
ಯುಕೆಜಿ ಮಕ್ಕಳು ಶಾಲಾ ಚಟುವಟಿಕೆ ಕುರಿತು ಅನಿಸಿಕೆಗಳನ್ನು ಹಂಚಿಕೊಂಡರು. ನಂತರ ಸಾಂಸ್ಕೃತಿಕ ಕಾರ್ಯಕಮ ನಡೆಸಿಕೊಟ್ಟರು. ಬಿಜಿಎಸ್ ಸಂಸ್ಥೆಯ ಲಿಂಗೇಶ್, ಶಾಲೆಯ ಮುಖ್ಯಶಿಕ್ಷಕಿ ವಿ.ಆಶಾ ಹಾಗೂ ಶಿಕ್ಷಕರು, ಸಿಬ್ಬಂದಿ, ವಿದ್ಯಾರ್ಥಿಗಳು, ಪಾಲಕರು ಹಾಜರಿದ್ದರು.