ರೈತ ಸಂಘದ ಪದಾಧಿಕಾರಿಗಳು ಜಿಲ್ಲಾ ಹಾಲು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಡಾ.ಮಂಜೇಶ್ ಅವರಿಗೆ ಮನವಿ ಸಲ್ಲಿಸಿದರು. ಚಂದ್ರಶೇಖರ್, ಮಂಜೇಶ್‌ಗೌಡ, ತೇಜಸ್, ಮಹೇಶ್ ಇದ್ದರು.
- ಸಾಮಾಜಿಕ ಜಾಲತಾಣಗಳಲ್ಲಿ ನಂದಿನಿ ಉತ್ಪನ್ನಗಳ ಬಗ್ಗೆ ಅಪಪ್ರಚಾರ
- ರೈತ ಸಂಘದ ಪದಾಧಿಕಾರಿಗಳು
ಮದ್ದೂರು: ಸಾಮಾಜಿಕ ಜಾಲತಾಣಗಳಲ್ಲಿ ನಂದಿನಿ ಉತ್ಪನ್ನಗಳ ಬಗ್ಗೆ ಅಪಪ್ರಚಾರ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ರೈತ ಸಂಘದ ಪದಾಧಿಕಾರಿಗಳು ಶುಕ್ರವಾರ ಗೆಜ್ಜಲಗೆರೆ ಜಿಲ್ಲಾ ಹಾಲು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಡಾ.ಮಂಜೇಶ್ ಅವರಿಗೆ ಮನವಿ ಸಲ್ಲಿಸಿದರು.
ರೈತ ಸಂಘದ ಮುಖಂಡ ಸೊ.ಶಿ.ಪ್ರಕಾಶ್ ಮಾತನಾಡಿ, ಸಾಮಾಜಿಕ ಜಾಲತಾಣಗಳಲ್ಲಿ ವೈದ್ಯೆಯೊಬ್ಬರು ನಂದಿನಿ ಉತ್ಪನ್ನಗಳ ಬಗ್ಗೆ ಲಘು ಮತ್ತು ಅವಹೇಳನಕಾರಿಯಾಗಿ ಮಾತನಾಡಿರುವ ವಿಡಿಯೋ ವೈರಲ್ ಆಗಿದೆ. ಇದರಿಂದ ನಂದಿನಿ ಉತ್ಪನ್ನಗಳ ಬಗ್ಗೆ ಜನರಲ್ಲಿ ತಪ್ಪು ಅಭಿಪ್ರಾಯ ಬರುತ್ತದೆ. ಆದ್ದರಿಂದ ಮಹಿಳೆ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಮನ್‌ಮುಲ್ ವ್ಯವಸ್ಥಾಪಕ ನಿರ್ದೇಶಕ ಡಾ.ಮಂಜೇಶ್ ಮಾತನಾಡಿ, ನಂದಿನಿ ಉತ್ಪನ್ನಗಳ ಬಗ್ಗೆ ಕೆಟ್ಟದಾಗಿ ಮಾತನಾಡಿ ವಿಡಿಯೋ ಹರಿ ಬಿಟ್ಟಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.
ರೈತ ಮುಖಂಡರಾದ ಇಂಡುವಾಳು ಚಂದ್ರಶೇಖರ್, ನಾಗೇಂದ್ರಸ್ವಾಮಿ, ತೇಜಸ್, ಮಹೇಶ್ ಇದ್ದರು.