ಕೆ.ಆರ್.ಪೇಟೆ ಕರ್ನಾಟಕ ಪಬ್ಲಿಕ್ ಶಾಲೆ ಆವರಣದಲ್ಲಿ ಸೋಮವಾರ ಆಯೋಜಿಸಿದ್ದ ಜಗಜ್ಯೋತಿ ಬಸವೇಶ್ವರ ಜಯಂತಿ ಕಾರ್ಯಕ್ರಮವನ್ನು ಶಾಸಕ ಎಚ್.ಟಿ.ಮಂಜು ಉದ್ಘಾಟಿಸಿದರು.ಬಿ.ನಾಗೇಂದ್ರಕುಮಾರ್, ಗವಿಮಠದ ಶ್ರೀ ಸ್ವತಂತ್ರ ಚನ್ನವೀರಯ್ಯ ಸ್ವಾಮೀಜಿ, ಸುಜೇಂದ್ರಕುಮಾರ್, ಮಲ್ಲಿಕಾರ್ಜುನ್, ಲೋಕೇಶ್ ಇತರರು ಇದ್ದರು. 
ಮಂಡ್ಯ

ಮಾನವೀಯತೆ ಎತ್ತಿಹಿಡಿದ ದಾರ್ಶನಿಕ

ಪ್ರಮುಖ ಮುಖ್ಯಾಂಶಗಳು

  • ಶಾಸಕ ಎಚ್.ಟಿ.ಮಂಜು ಅಭಿಪ್ರಾಯ
ಕೆ.ಆರ್.ಪೇಟೆ: ಜಗಜ್ಯೋತಿ ಬಸವೇಶ್ವರರು ಜಾತಿ ರಹಿತ ಸಮಾಜವನ್ನು ನಿರ್ಮಾಣಕ್ಕೆ ಶ್ರಮಿಸಿದ ಮೊದಲಿಗರು ಎಂದು ಶಾಸಕ ಎಚ್.ಟಿ.ಮಂಜು ಹೇಳಿದರು.
ಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲೆ ಆವರಣದಲ್ಲಿ ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಸೋಮವಾರ ಆಯೋಜಿಸಿದ್ದ ಜಗಜ್ಯೋತಿ ಬಸವೇಶ್ವರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಬಸವಣ್ಣ ಒಬ್ಬ ವ್ಯಕ್ತಿ ಅಲ್ಲ, ಅವರು ಒಂದು ಚಳವಳಿ. ಕರ್ನಾಟಕದ ಸಾಂಸ್ಕೃತಿಕ ರಾಯಭಾರಿಯಾಗಿದ್ದು, ಕನ್ನಡಕ್ಕೆ ವಚನಗಳ ಕೊಡುಗೆ ನೀಡಿದ್ದಾರೆ. ವಚನಗಳ ಮೂಲಕ ಸಮಾನತೆಗಾಗಿ ಹೋರಾಡಿದ ಕ್ರಾಂತಿಕಾರಿ. ಮಾನವೀಯತೆಯನ್ನು ಎತ್ತಿಹಿಡಿದ ದಾರ್ಶನಿಕ ಎಂದು ತಿಳಿಸಿದರು.
ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ನಾಗೇಂದ್ರಕುಮಾರ್ ಮಾತನಾಡಿದರು. ಸಂಯೋಜಕ ವೀರಭದ್ರಯ್ಯ ಮಾತನಾಡಿದರು. ಗಾಯಕರಾದ ಶ್ರೀಕಾಂತ್ ಚಿಮ್ಮಲ್ ಮತ್ತು ರವಿ ಶಿವಕುಮಾರ್ ತಂಡದ ಸದಸ್ಯರು ಬಸವಗೀತೆ ಹಾಗೂ ನಾಡಗೀತೆ ಹಾಡಿದರು.
ಗವಿಮಠದ ಶ್ರೀ ಸ್ವತಂತ್ರ ಚನ್ನವೀರಯ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ತಾಲೂಕು ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷ ಸುಜೇಂದ್ರಕುಮಾರ್, ಆರ್‌ಟಿಒ ಅಧಿಕಾರಿಗಳ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ್, ಗ್ರೇಡ್ 2 ತಹಸೀಲ್ದಾರ್ ಲೋಕೇಶ್, ಬಿಇಒ ತಿಮ್ಮೇಗೌಡ, ತಾ.ಪಂ.ಇಒ ಸುಷ್ಮಾ, ಪುರಸಭೆ ಮುಖ್ಯಾಧಿಕಾರಿ ಅಶೋಕ್, ತಾಲೂಕು ಭೂ ದಾಖಲೆಗಳ ಸಹಾಯಕ ನಿರ್ದೇಶಕ ಸಿದ್ದಯ್ಯ, ವಲಯ ಅರಣ್ಯಾಧಿಕಾರಿ ಡಾ.ಅನಿತಾ, ತಾಲೂಕು ಸಮಾಜ ಕಲ್ಯಾಣಾಧಿಕಾರಿ ದಿವಾಕರ್, ಮುಖಂಡರಾದ ತೋಟಪ್ಪಶೆಟ್ಟಿ, ಬ್ಯಾಂಕ್ ಪರಮೇಶ್, ಎಲ್‌ಐಸಿ ಶಿವಪ್ಪ ಇದ್ದರು.
ಕಾರ್ಯಕ್ರಮಕ್ಕೂ ಮುನ್ನ ಜಗಜ್ಯೋತಿ ಬಸವೇಶ್ವರರ ಭಾವಚಿತ್ರವನ್ನು ಪ್ರವಾಸಿ ಮಂದಿರದಿಂದ ವೇದಿಕೆವರೆಗೆ ಬೆಳ್ಳಿ ರಥದಲ್ಲಿ ಜಾನಪದ ಕಲಾಮೇಳಗಳೊಂದಿಗೆ ಮೆರವಣಿಗೆ ನಡೆಸಲಾಯಿತು.