ಮಳವಳ್ಳಿ ಸಾರಿಗೆ ಬಸ್ ನಿಲ್ದಾಣದಲ್ಲಿ ಅಳವಡಿಸಲಾಗಿರುವ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಹಾಗೂ ಎಸ್‌ಸಿಪಿ ಯೋಜನೆಗಳ ಅರಿವು ಮತ್ತು ಜಾಗೃತಿ ಮೂಡಿಸಲು ಅಳವಿಸಿರುವ ಛಾಯಚಿತ್ರ ಪ್ರದರ್ಶನಕ್ಕೆ ತಹಸೀಲ್ದಾರ್ ಡಾ.ಲೋಕೇಶ್ ಚಾಲನೆ ನೀಡಿ ಮಾತನಾಡಿದರು. ವಾರ್ತಾ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಹರೀಶ್, ಸಾರಿಗೆ ಸಂಸ್ಥೆ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಾಶ್ ಹಾಗೂ ಚಾಲಕ, ನಿರ್ವಾಹಕ ವರ್ಗದವರು ಇದ್ದರು.  
ಮಂಡ್ಯ

ಛಾಯಾಚಿತ್ರ ಪ್ರದರ್ಶನ ಜನಸಾಮಾನ್ಯರ ಮಾಹಿತಿ ನೀಡಲು ಸಹಕಾರಿ

ಮಳವಳ್ಳಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗಾಗಿ ರಾಜ್ಯ ಸರ್ಕಾರ ರೂಪಿಸಿರುವ ಕಾರ್ಯಕ್ರಮಗಳ ಕುರಿತು ಯೋಜಿಸಲಾಗಿದ್ದ ಛಾಯಾಚಿತ್ರ ಪ್ರದರ್ಶನ ಜನಸಾಮಾನ್ಯರ ಮಾಹಿತಿ ಒದಗಿಸಲು ಸಹಕಾರಿಯಾಗಿದೆ ಎಂದು ತಹಸೀಲ್ದಾರ್ ಡಾ.ಲೋಕೇಶ್ ತಿಳಿಸಿದರು.
ಪಟ್ಟಣದ ಸಾರಿಗೆ ಬಸ್ ನಿಲ್ದಾಣದಲ್ಲಿ ಸೋಮವಾರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ನಿರ್ಮಿಸಲಾಗಿದ್ದ ಪಂಚ ಗ್ಯಾರಂಟಿ ಯೋಜನೆಗಳು ಹಾಗೂ ಎಸ್‌ಸಿಪಿ ಯೋಜನೆಯ ಅರಿವು ಮತ್ತು ಜಾಗೃತಿ ಮೂಡಿಸಲು ವಿಶೇಷ ಛಾಯಾಚಿತ್ರ ಪ್ರದರ್ಶನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಸಾರ್ವಜನಿಕರ ಅಭಿವೃದ್ಧಿಗಾಗಿ ಅನೇಕ ಯೋಜನೆಗಳನ್ನು ರೂಪಿಸಿದೆ. ಸರ್ಕಾರಿ ಯೋಜನೆಗಳ ಕುರಿತಾಗಿ ಜನರಿಗೆ ತಿಳಿಸಲು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಮ್ಮಿಕೊಂಡಿರ ವಿನೂತನ ಛಾಯಾಚಿತ್ರ ಪ್ರದರ್ಶನದಿಂದ ರಾಜ್ಯ ಸರ್ಕಾರ ನೀಡುತ್ತಿರುವ ಯೋಜನೆಗಳ ಸಮರ್ಪಕ ಮಾಹಿತಿಗಳು ನೇರವಾಗಿ ಸಾರ್ವಜನಿಕರಿಗೆ ತಿಳಿಯಲು ಅನುಕೂಲವಾಗುತ್ತಿದೆ ಎಂದು ಹೇಳಿದರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಟಿ.ಕೆ ಹರೀಶ್ ಮಾತನಾಡಿ, ಕರ್ನಾಟಕದ ಗ್ಯಾರಂಟಿ ಯೋಜನೆಗಳ ಕುರಿತು ಜನರಿಗೆ ಅರಿವು ಮೂಡಿಸಲು, ಛಾಯಾಚಿತ್ರ ಪ್ರದರ್ಶನವನ್ನು ನಮ್ಮ ಇಲಾಖೆಯಿಂದ ಆಯೋಜಿಸಲಾಗಿದ್ದು, ಈ ಪ್ರದರ್ಶನಗಳು ’ಶಕ್ತಿ’, ’ಗೃಹ ಜ್ಯೋತಿ’, ’ಗೃಹ ಲಕ್ಷ್ಮಿ’, ’ಅನ್ನಭಾಗ್ಯ’ ಮತ್ತು ’ಯುವ ನಿಧಿ’ ಯೋಜನೆಗಳ ಅನುಷ್ಠಾನ ಮತ್ತು ಪ್ರಯೋಜನಗಳನ್ನು ಜನರಿಗೆ ತಿಳಿಸಿಕೊಡುವ ಗುರಿಯನ್ನು ಹೊಂದಿವೆ ಎಂದು ತಿಳಿಸಿದರು.
ಜನರ ಗಮನಸೇಳೆದ ಛಾಯಾಚಿತ್ರಗಳು: ಮಳವಳ್ಳಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಆಯೋಜಿಸಲಾಗಿದ್ದ ವಿಶೇಷ ಛಾಯಾಚಿತ್ರಗಳ ಪ್ರದರ್ಶನ ಸಾರ್ವಜನಿಕ ಗಮನ ಸೆಳೆಯಿತು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಮೆಯ ಎದುರು ಹಾಗೂ ವಿವಿಧ ಛಾಯಾಚಿತ್ರಗಳು ಮುಂದೆ ನಿಂತು ಜನರು ಸೆಲ್ಫಿ ಕ್ಲಿಕ್ಕಿಸಿದರು.
ಕಾರ್ಯಕ್ರಮದಲ್ಲಿ ಮಳವಳ್ಳಿ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಾಶ್ ಸೇರಿಂದತೆ ಕೆಎಸ್‌ಆರ್‌ಟಿಸಿ ಸಿಬ್ಬಂದಿ ವರ್ಗದವರು ಹಾಜರಿದ್ದರು.