ಹಲಗೂರಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಕೆ.ಎಂ.ನಂದೀಶ್‌ಚಾಲನೆ ನೀಡಿದರು.
ಹಲಗೂರು: ಐದು ವರ್ಷದೊಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೋ ಹನಿ ಹಾಕಿಸುವುದರಿಂದ ಅಂಗವಿಕಲತೆ ತಡೆಗೆ ಸಹಕಾರಿಯಾಗಲಿದೆ ಎಂದು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಕೆ.ಎಂ.ನಂದೀಶ್ ತಿಳಿಸಿದರು.
ಹಲಗೂರಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಇಂದು 850ಕ್ಕೂ ಹೆಚ್ಚು ಮಕ್ಕಳಿಗೆ ಹನಿ ಹಾಕಲಾಗಿದೆ. ಸೋಮವಾರ ಮತ್ತು ಮಂಗಳವಾರ ಮನೆಗಳಿಗೆ ಭೇಟಿ ನೀಡಿ ಹನಿ ಹಾಕಲಾಗುವುದು. ಭವಿಷ್ಯದಲ್ಲಿ ಮಕ್ಕಳಿಗೆ ಅಂಗವಿಕಲತೆ ಬಾಧಿಸಬಾರದು ಎಂಬ ಕಾರಣಕ್ಕೆ ಅಭಿಯಾನ ಆಯೋಜಿಸಲಾಗಿದೆ. ದೇಶವನ್ನು ಪೋಲಿಯೋಮುಕ್ತವಾಗಿಸಲು ಸಹಕಾರ ನೀಡಬೇಕು ಎಂದರು.
ಹಲಗೂರು ಪ್ರಾಥಮಿಕ ಆರೋಗ್ಯ ಕೇಂದ್ರ, ಮುತ್ತತ್ತಿ ರಸ್ತೆಯಲ್ಲಿರುವ ಗಣಪತಿ ದೇವಸ್ಥಾನ, ಸಾರಿಗೆ ಬಸ್ ನಿಲ್ದಾಣ, ಕೊನ್ನಾಪುರದ ಸರ್ಕಾರಿ ಪ್ರಾಥಮಿಕ ಶಾಲೆ, ಮಾರಗೌಡನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ತೊರೆ ಕಾಡನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಕೇಂದ್ರಗಳನ್ನು ತೆರೆಯಲಾಗಿತ್ತು. ಕಾರ್ಯಕ್ರಮದಲ್ಲಿ ಗೀತಾ, ಶಿವಕುಮಾರ, ಸುನಿಲ್ ಕುಮಾರ್, ಶ್ವೇತಾ ,ಮಹೇಶ್ ಇದ್ದರು.