ಮಂಡ್ಯದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ ಮಾತನಾಡಿದರು. 
ಮಂಡ್ಯ

ಅಭಿವೃದ್ಧಿ ಕಾರ್ಯ ಮುಂದಿಟ್ಟು ಚರ್ಚೆಗೆ ಬರಲಿ: ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ.ಡಿ.ಗಂಗಾಧರ ಹೇಳಿಕೆ

ಕೆ.ಎನ್.ರಾಘವೇಂದ್ರ

ಪ್ರಮುಖ ಮುಖ್ಯಾಂಶಗಳು

  • ಅಭಿವೃದ್ದಿ ಕಾರ್ಯಗಳನ್ನು ಸಹಿಸದೇ ಜೆಡಿಎಸ್ ಆರೋಪ
  • ಕಪೋಲ ಕಲ್ಪಿತ, ನಿರಾಧಾರ ಆರೋಪಗಳನ್ನು ಮಾಡಬಾರದು
ಮಂಡ್ಯ: ಅಭಿವೃದ್ದಿ ಕಾರ್ಯಗಳನ್ನು ಸಹಿಸದ ಮನ್‌ಮುಲ್ ನಿರ್ದೇಶಕ ಬಿ.ಆರ್.ರಾಮಚಂದ್ರು ಅವರು ಶಾಸಕ ಪಿ.ರವಿಕುಮಾರ್ ಗಣಿಗ ವಿರುದ್ಧ ಸುಳ್ಳು ಆರೋಪ ಮಾಡಿರುವುದು ಖಂಡನೀಯ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ.ಡಿ.ಗಂಗಾಧರ ಆಕ್ರೋಶ ವ್ಯಕ್ತಪಡಿಸಿದರು. 
ರಾಮಚಂದ್ರು ಅವರು ಸೈದ್ಧಾಂತಿಕ, ಆಡಳಿತ ಹಾಗೂ ಅಭಿವೃದ್ಧಿಯ ಪರ ಚರ್ಚೆಗೆ ಮುಂದಾಬೇಕು. ಅದನ್ನು ಬಿಟ್ಟು ಕಪೋಲ ಕಲ್ಪಿತ, ನಿರಾಧಾರ ಆರೋಪಗಳನ್ನು ಮಾಡಬಾರದು ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಜನಪ್ರತಿನಿಧಿಗಳನ್ನು ಪ್ರಶ್ನಿಸುವುದು ನಾಗರಿಕ ಸಮಾಜದ ಜವಾಬ್ದಾರಿ. ಕ್ಷೇತ್ರಕ್ಕೆ ಅಭಿವೃದ್ಧಿ ಕಾರ್ಯಗಳನ್ನು ಮಾಡದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರನ್ನು ಜನತೆಯ ಪರವಾಗಿ ಶಾಸಕರು ಖಂಡಿಸಿದ್ದಾರೆ. ಕೇಂದ್ರ ಸಚಿವರಾಗಿ ಯಾವುದೇ ಕೈಗಾರಿಕೆಯನ್ನು ಜಿಲ್ಲೆಗೆ ಕೊಡದ ಅವರು 2 ವರ್ಷಗಳಲ್ಲಿ ಉದ್ಯೋಗ ಸೃಷ್ಠಿಸುವಲ್ಲಿ ವಿಫಲರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ಮುಂದಿಟ್ಟು ಚರ್ಚೆಗೆ ಬಂದಲ್ಲಿ ಸ್ವಾಗತ. ಅದನ್ನು ಬಿಟ್ಟು ವೈಯಕ್ತಿಕ ಟೀಕೆಗೆ ಇಳಿಯಬಾರದು. ಶಾಸಕರು ರಾಮಚಂದ್ರು ಅವರಿಗೆ ಟೆಂಡರ್ ಆದ ಕಾಮಗಾರಿಗೆ ಸಹಕಾರ ಮಾಡುತ್ತಿದ್ದು, ಶಾಸಕರ ಒಳ್ಳೆ ಕೆಲಸಕ್ಕೆ ಪ್ರೋತ್ಸಾಹ ನೀಡುವಂತೆ ಆಗ್ರಹಿಸಿದರು.
ಗ್ಯಾರಂಟಿ ಯೋಜನೆ ಅನುಷ್ಠಾನದ ತಾಲೂಕು ಅಧ್ಯಕ್ಷ ರುದ್ರಪ್ಪ, ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಉಪಾಧ್ಯಕ್ಷೆ ವಿಜಯಲಕ್ಷ್ಮೀ ರಘುನಂದನ್, ಮುಡಾ ಮಾಜಿ ಅಧ್ಯಕ್ಷ ನಯೀಂ, ಕಾಂಗ್ರೆಸ್ ಎಸ್ಸಿ, ಎಸ್ಟಿ ವಿಭಾಗದ ಜಿಲ್ಲಾಧ್ಯಕ್ಷ ವಿಜಯ್‌ಕುಮಾರ್ ಇದ್ದರು.