ಮಂಡ್ಯದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಸ್ವಾಗತ ಸಮಿತಿ ಸದಸ್ಯ ಗಂಗರಾಜು ಮಾತನಾಡಿದರು.
- ನೇರಲಕೆರೆ ಗ್ರಾಮದಲ್ಲಿ ಸರ್ವ ಧರ್ಮ ಮಾನವ ಸಮ್ಮೇಳನ
- ಡಾ.ನಿರ್ಮಲಾನಂದನಾಥ ಸ್ವಾಮೀಜಿ ಸಾನ್ನಿಧ್ಯ
- ಮಳವಳ್ಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಸೇರಿದಂತೆ ಹಲವರು ಭಾಗಿ
ಮಂಡ್ಯ: ಬುದ್ಧ ಭಾರತ ಫೌಂಡೇಷನ್ ವತಿಯಿಂದ ಫೆ.3ರಂದು ಶ್ರೀರಂಗಪಟ್ಟಣ ತಾಲೂಕು ನೇರಲಕೆರೆ ಗ್ರಾಮದಲ್ಲಿ ಸರ್ವ ಧರ್ಮ ಮಾನವ
ಸಮ್ಮೇಳನ ಆಯೋಜಿಸಲಾಗಿದೆ ಎಂದು ಸ್ವಾಗತ ಸಮಿತಿ ಸದಸ್ಯ ಗಂಗರಾಜು ತಿಳಿಸಿದರು.
ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಸಾನ್ನಿಧ್ಯದಲ್ಲಿ ನಡೆಯುವ ಸಮ್ಮೇಳನದಲ್ಲಿ ಮನೋರಕ್ಕಿತ ಭಂತೆ, ಡಾ.ತ್ರಿನೇತ್ರ ಮಹಂತ ಶಿವಯೋಗಿ ಸ್ವಾಮೀಜಿ ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಮಳವಳ್ಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅಧ್ಯಕ್ಷತೆ ವಹಿಸುವರು. ಶಾಸಕ ಪಿ.ರವಿಕುಮಾರ್ ಗಣಿಗ, ಜಿಲ್ಲಾಧಿಕಾರಿ ಡಾ.ಕುಮಾರ, ಜಿ.ಪಂ. ಸಿಇಒ ಕೆ.ಆರ್.ನಂದಿನಿ, ಜಿಲ್ಲಾ ಎಸ್ಪಿ ಡಾ.ವಿ.ಜೆ.ಶೋಭಾರಾಣಿ, ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ, ಕರ್ನಾಟಕ ಸಂಘದ ಅಧ್ಯಕ್ಷ ಡಾ.ಜಯಪ್ರಕಾಶಗೌಡ, ಎಸ್.ಬಿ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಡಾ.ಮೀರಾ ಶಿವಲಿಂಗಯ್ಯ, ನಿವೃತ್ತ ಡಿಸಿಪಿ ಸಿದ್ದರಾಜು, ವಕೀಲರ ಸಂಘದ ಅಧ್ಯಕ್ಷ ಟಿ.ಎಸ್.ಸತ್ಯಾನಂದ ಭಾಗವಹಿಸುವರು ಎಂದು ವಿವರಿಸಿದರು.
ಫೌಂಡೇಷನ್ ಅಧ್ಯಕ್ಷ ಜೆ.ರಾಮಯ್ಯ, ಮುಖಂಡರಾದ ಮಹೇಂದ್ರ, ಪ್ರಶಾಂತ್, ನರಸಿಂಹಮೂರ್ತಿ ಇತರರಿದ್ದರು.