ಕರ್ನಾಟಕ ವಿದ್ಯುತ್ ಸರಬರಾಜು ನಿಗಮ ಖಾಸಗೀಕರಣಕ್ಕೆ ಮುಂದಾಗಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕ್ರಮ ಖಂಡಿಸಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಕಾರ್ಯಕರ್ತರು ಮದ್ದೂರು ತಾಲೂಕು ಕಚೇರಿ ಬಳಿ ಪ್ರತಿಭಟನೆ ನಡೆಸಿ ಗ್ರೇಡ್-2 ತಹಸೀಲ್ದಾರ್ ಸೋಮಶೇಖರ್ ಅವರಿಗೆ ಮನವಿ ಪತ್ರ ಸಲ್ಲಿಸಿದರು. ವಿ.ಸಿ.ಉಮಾಶಂಕರ್, ತಿಪ್ಪೂರು ರಾಜೇಶ್, ಎಂ.ಸಿ.ಲಿಂಗರಾಜು, ಚನ್ನಪ್ಪ, ಉಮೇಶ್ ಇದ್ದರು. 
ಮಂಡ್ಯ

ಖಾಸಗೀಕರಣ ವಿರೋಧಿಸಿ ಪ್ರತಿಭಟನೆ

ಮದ್ದೂರು: ಕರ್ನಾಟಕ ವಿದ್ಯುತ್ ಸರಬರಾಜು ನಿಗಮವನ್ನು ಖಾಸಗೀಕರಣಗೊಳಿಸಲು ಹೊರಟಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕ್ರಮ ಖಂಡಿಸಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಕಾರ್ಯಕರ್ತರು ಮದ್ದೂರು ತಾಲೂಕು ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಸೋಮವಾರ ತಾಲೂಕು ಕಚೇರಿ ಎದುರು ಜಮಾಯಿಸಿದ ಕಾರ್ಯಕರ್ತರು ವಿದ್ಯುತ್ ಖಾಸಗೀಕರಣ ಮಾಡಲು ಮುಂದಾಗಿರುವ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಕ್ರಮ ಖಂಡಿಸಿ ಘೋಷಣೆಗಳನ್ನು ಕೂಗಿದರು. ವೇದಿಕೆ ಜಿಲ್ಲಾಧ್ಯಕ್ಷ ವಿ.ಸಿ.ಉಮಾಶಂಕರ ಮಾತನಾಡಿ, ಕರ್ನಾಟಕ ವಿದ್ಯುತ್ ಪ್ರಸರಣಾ ನಿಗಮಗಳಿಗೆ ಶತಮಾನಗಳ ಇತಿಹಾಸವಿದೆ.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕರ್ನಾಟಕ ವಿದ್ಯುತ್ ಸರಬರಾಜು ಮಂಡಳಿ ಐದು ವಿಭಾಗಗಳಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಸರ್ಕಾರಗಳು ಖಾಸಗೀಕರಣಗೊಳಿಸುವ ಉದ್ದೇಶವಾದರೂ ಏನು? 5 ವಿಭಾಗಗಳಲ್ಲಿಯೂ ಕನ್ನಡಿಗರು ಕಾರ್ಯನಿರ್ವಹಿಸುತ್ತಿದ್ದಾರೆ. ಖಾಸಗಿಕರಣಗೊಂಡರೆ ಅನ್ಯ ರಾಜ್ಯದವರಿಗೆ ಉದ್ಯೋಗ ಸಿಗಲಿದ್ದು ಕನ್ನಡಿಗರಿಗೆ ಉದ್ಯೋಗ ಸಿಗುವುದಿಲ್ಲ ಎಂದರು.
ಖಾಸಗೀಕರಣ ಮಾಡಲು ಮುಂದಾದರೆ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಚಳವಳಿ ರೂಪಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ತಾಲೂಕು ಅಧ್ಯಕ್ಷ ತಿಪ್ಪೂರು ರಾಜೇಶ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ಸಿ.ಲಿಂಗರಾಜು, ಮಹಿಳಾ ಘಟಕದ ಅಧ್ಯಕ್ಷೆ ಸೆಲ್ವಿ ಮುರುಗೇಶ್, ಪ್ರಧಾನ ಕಾರ್ಯದರ್ಶಿ ಸೋಂಪುರ ಉಮೇಶ್, ಯುವ ಘಟಕ ಅಧ್ಯಕ್ಷ ವಿ.ಪಿ.ವಿಶ್ವಾಸ್, ಗೌರವಾಧ್ಯಕ್ಷ ವಿ.ಎಚ್.ಶಿವಲಿಂಗಯ್ಯ, ಪಟೇಲ್ ಹರೀಶ್, ಆಲೂರು ಚೆನ್ನಪ್ಪ, ಕೊಪ್ಪ ಹೋಬಳಿ ಅಧ್ಯಕ್ಷ ಮಹೇಂದ್ರ, ಸಂಘಟನಾ ಕಾರ್ಯದರ್ಶಿ ಅಜ್ಜಹಳ್ಳಿ ಕರಿಗೌಡ, ಎಸ್.ಎಲ್.ಉಮೇಶ್, ಚೇತನ್ ಚಾಮನಹಳ್ಳಿ, ಉಪಾಧ್ಯಕ್ಷ ನಾರಾಯಣ, ಶೇಖರಪ್ಪ, ಬೋರಾಪುರ ಸಿದ್ದರಾಮ, ವಿ.ಪಿ.ವರದರಾಜು, ವಿ.ಎಂ.ಶಿವರಾಜು, ವಿ.ಬಿ.ಸದಾನಂದ ಹಾಜರಿದ್ದರು.