ಕೆ.ಆರ್.ಸಾಗರ ಗ್ರಾಮದಲ್ಲಿನ ಮುಖ್ಯ ರಸ್ತೆಯಲ್ಲಿರುವ ಈದ್ಗಾ ಮೈದಾನದಲ್ಲಿ ರಂಜಾನ್ ಹಬ್ಬದ ಪ್ರಯುಕ್ತ ಮುಸ್ಲಿಮರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.
ಕೆ.ಆರ್.ಸಾಗರ: ಕೆ.ಆರ್.ಸಾಗರ ಗ್ರಾಮದಲ್ಲಿನ ಮುಖ್ಯ ರಸ್ತೆಯಲ್ಲಿರುವ ಮಸೀದಿ ಹಿಂಭಾಗದ ಈದ್ಗಾ ಮೈದಾನದಲ್ಲಿ ಶನಿವಾರ ರಂಜಾನ್ ಹಬ್ಬದ ಪ್ರಯುಕ್ತ ಮುಸ್ಲಿಮರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.
ಕೆ.ಆರ್.ಸಾಗರ ಸೇರಿದಂತೆ ಸುತ್ತಮುತ್ತಲಿನ ಗ್ರಾಮದ ಮುಸ್ಲಿಮರು ಬೆಳಗ್ಗೆ ಮಸೀದಿಗೆ ಭೇಟಿ ನೀಡಿ ನಂತರ ಈದ್ಗಾ ಮೈದಾನದಲ್ಲಿ ಧರ್ಮಗುರುಗಳ ನೇತೃತ್ವದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಧರ್ಮಗುರುಗಳು ಕುರಾನ್ ಪಠಣ ಮಾಡಿ, ರಂಜಾನ್ ಹಬ್ಬದ ಮಹತ್ವ ತಿಳಿಸಿ, ಸಹಭಾಳ್ವೆ ಹಾಗೂ ಸೌಹಾರ್ದತೆಯಿಂದ ಇರುವಂತೆ ತಿಳಿಸಿದರು. ನಂತರ ಮುಸ್ಲಿಮರು ಶುಭಾಶಯ ವಿನಿಮಯ ಮಾಡಿಕೊಂಡರು.