ಆರ್.ಮಹೇಶ್, ಹಿರಿಯ ಸಿವಿಲ್ ಪ್ರಧಾನ ನ್ಯಾಯಾಧೀಶ
ಪಾಂಡವಪುರ: ಮಾ.14 ರಂದು ರಾಜ್ಯಾದ್ಯಂತ ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಇದರ ಭಾಗವಾಗಿ ಪಾಂಡವಪುರದಲ್ಲಿಯೂ ಕೂಡ ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಲಾಗಿದ್ದು, ಇದರಲ್ಲಿ ಸಾರ್ವಜನಿಕರು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಮತ್ತು ವ್ಯಾಜ್ಯ ಪೂರ್ವ ಪುಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬೇಕು ಎಂದು ಜೆಎಂಎಫ್‌ಸಿ ನ್ಯಾಯಾಲಯದ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಆರ್.ಮಹೇಶ್ ಹೇಳಿದರು.
ಸಾರ್ವಜನಿಕರು ರಾಜೀ ಸಂಧಾನದ ಮೂಲಕ ಪ್ರಕರಣ ಇತ್ಯರ್ಥಪಡಿಸಲು ಇಚ್ಛಿಸಿದಲ್ಲಿ ಮುಂಚಿತವಾಗಿ ಸಂಬಂಧಪಟ್ಟ ಜಿಲ್ಲಾ, ಕಾನೂನು ಸೇವೆಗಳ ಪ್ರಾಧಿಕಾರ/ ತಾಲೂಕು ಕಾನೂನು ಸೇವೆಗಳ ಸಮಿತಿಗಳಿಗೆ ಆನ್‌ಲೈನ್/ವೀಡಿಯೋ ಕಾನ್ಫರೆನ್ಸ್/ಇ-ಮೇಲ್ ಮುಖಾಂತರ ಅಥವಾ ಖುದ್ದಾಗಿ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬೇಕೆಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಜತೆಗೆ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಸಂಬಂಧಪಟ್ಟ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಗಳನ್ನು ಮತ್ತು ತಾಲೂಕು ಕಾನೂನು ಸೇವೆಗಳ ಸಮಿತಿಗಳನ್ನು ಖುದ್ದಾಗಿ ಆನ್‌ಲೈನ್/ವೀಡಿಯೋ ಕಾನ್ಫರೆನ್ಸ್ /ಇ-ಮೇಲ್/ ವಾಟ್ಸ್‌ಆ್ಯಪ್/ ಎಲೆಕ್ಟ್ರಾನಿಕ್ ಮೋಡ್ ಮೂಲಕ ಸಂಪರ್ಕಿಸಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಕೋರಿದರು.
ಸುದ್ದಿಗೋಷ್ಠಿಯಲ್ಲಿ ಪ್ರಧಾನ ಸಿವಿಲ್ ನ್ಯಾಯಾಧೀಶೆ ಬಿ.ಪಾರ್ವತಮ್ಮ, ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶ ಎನ್.ಬಾಬು, ವಕೀಲರ ಸಂಘದ ಅಧ್ಯಕ್ಷ ಗಂಗರಾಜು ಇತರರಿದ್ದರು.
ಆರ್.ಮಹೇಶ್, ಹಿರಿಯ ಸಿವಿಲ್ ಪ್ರಧಾನ ನ್ಯಾಯಾಧೀಶ