ನ್ಯಾಯಾಲಯದಲ್ಲಿ ವಕೀಲ ಹುದ್ದೆಗೆ ನೇಮಕಾತಿ 
ಮಂಡ್ಯ

ಅಪರ ಸರ್ಕಾರಿ ವಕೀಲರ ನೇಮಕಾತಿ: ಅರ್ಜಿ ಸಲ್ಲಿಕೆಗೆ ಮಾ.20ರವರೆಗೆ ಅವಕಾಶ

ಪ್ರಮುಖ ಮುಖ್ಯಾಂಶಗಳು

  • ಮದ್ದೂರು ನಗರದ ಹಿರಿಯ ಶ್ರೇಣಿ ನ್ಯಾಯಾಲಯ
  • ಮೂರು ವರ್ಷದ ಅವಧಿ ಅಥವಾ ಮುಂದಿನ ಆದೇಶವರೆಗೆ ನೇಮಕ
ಮದ್ದೂರು: ತಾಲೂಕಿನ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರ ಹುದ್ದೆಗೆ ಹೊಸದಾಗಿ ಮೂರು ವರ್ಷದ ಅವಧಿ ಅಥವಾ ಮುಂದಿನ ಆದೇಶದವರೆಗೆ ನೇಮಕ ಮಾಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಯು ಕರ್ನಾಟಕ ಕಾನೂನು ಅಧಿಕಾರಿಗಳ (ನೇಮಕಾತಿ ಮತ್ತು ಸೇವಾ ಷರತ್ತುಗಳು) ನಿಯಮಗಳು 1977ರ ನಿಯಮ 5ರನ್ವಯ ಕನಿಷ್ಟ 7 ವರ್ಷ ವಕೀಲಿ ವೃತ್ತಿ ಪೂರೈಸಿರಬೇಕು. ಸರ್ಕಾರಿ ಅಥವಾ ಅರೆ ಸರ್ಕಾರಿ/ ನಿಗಮ ಮಂಡಳಿಗಳಲ್ಲಿ ಯಾವುದೇ ಹುದ್ದೆ ಪಡೆದಿರಬಾರದು. ಜತೆಗೆ ಸ್ಥಳೀಯ ಸಂಸ್ಥೆಗಳ ಅಧಿಕಾರ ವ್ಯಾಪ್ತಿಯಲ್ಲಿ ಕಾನೂನು ಸಲಹೆಗಾರರಾಗಿ ನೇಮಕವಾಗಿರಬಾರದು. ಅರ್ಹರು ನೋಟರಿ ಅಫಿಡವಿಟ್ ಸೇರಿದಂತೆ ಅಗತ್ಯ ದಾಖಲೆಯೊಂದಿಗೆ ಮಾ.20ರ ಸಂಜೆ 5ಗಂಟೆಯೊಳಗೆ ಜಿಲ್ಲಾಧಿಕಾರಿ ಕಚೇರಿಗೆ ಅರ್ಜಿ ಸಲ್ಲಿಸಬಹುದೆಂದು ಜಿಲ್ಲಾಧಿಕಾರಿ ಡಾ.ಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.