ಪಾಂಡವಪುರ ತಾಲೂಕಿನ ಚಿನಕುರಳಿಯ ಎಸ್‌ಟಿಜಿ ಶಿಕ್ಷಣ ಸಂಸ್ಥೆಯಲ್ಲಿ ಆಚರಿಸಲಾದ 77ನೇ ಗಣರಾಜ್ಯೋತ್ಸವದಲ್ಲಿ ರಾಷ್ಟ್ರೀಯ ಪ್ಯಾರ ಶೂಟರ್ ಕ್ರೀಡಾಪಟು ಎಂ.ಎಸ್.ನಾಗೇಂದ್ರ ಧ್ವಜಾರೋಹಣ ನೆರವೇರಿಸಿದರು. ಸಂಸ್ಥೆ ಸಿಇಒ ಸಿ.ಪಿ.ಶಿವರಾಜು ಇತರರು ಇದ್ದರು. 
ಮಂಡ್ಯ

ಚಿನಕುರಳಿ ಎಸ್‌ಟಿಜಿ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ

ಪಾಂಡವಪುರ: ತಾಲೂಕಿನ ಚಿನಕುರಳಿ ಎಸ್ ಟಿಜಿ ಶಿಕ್ಷಣ ಸಂಸ್ಥೆಯಲ್ಲಿ 77ನೇ ಗಣರಾಜ್ಯೋತ್ಸವ ಹಾಗೂ ಶಾಲಾ ಕ್ರೀಡೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
ರಾಷ್ಟ್ರೀಯ ಪ್ಯಾರಾ ಶೂಟರ್ ಕ್ರೀಡಾಪಟು ಎಂ.ಎಸ್.ನಾಗೇಂದ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಇಂತಹ ಒಂದು ಶಿಕ್ಷಣ ಸಂಸ್ಥೆ ನೋಡಿ ಸಂತಸವಾಯಿತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿರುವುದು ನನಗೆ ಹೆಮ್ಮೆಯಾಗಿದೆ ಎಂದರು. 
ಮಕ್ಕಳು ಬದುಕಿನಲ್ಲಿ ಶಿಸ್ತು, ಸಂಸ್ಕಾರ ಹಾಗೂ ಜೀವನದ ಮೌಲ್ಯಗಳ ಮಹತ್ವಗಳನ್ನು ಅರ್ಥ ಮಾಡಿಕೊಂಡು ಶಿಸ್ತಿನಿಂದ ಬದುಕು ನಡೆಸಬೇಕು. ನಮ್ಮ ದೇಶಕ್ಕೆ ಬ್ರಿಟೀಷರಿಂದ ಸ್ವಾತಂತ್ರೃ ತಂದುಕೊಡಲು ಹೋರಾಟ ನಡೆಸಿದ ಮಹನೀಯರ ಬಗ್ಗೆ ಗೌರವ ಬೆಳೆಸಿಕೊಂಡು ಅವರನ್ನು ಸ್ಮರಿಸುವ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.
ಸಂಸ್ಥೆಯ ಸಿಇಒ ಸಿ.ಪಿ.ಶಿವರಾಜು ಮಾತನಾಡಿ, ಮಕ್ಕಳಲ್ಲಿ ದೇಶಾಭಿಮಾನ ಬೆಳೆಯಬೇಕು. ಆಗ ಮಾತ್ರ ದೇಶದ ಅಭಿವೃದ್ಧಿಗೆ ಸಹಾಯವಾಗುತ್ತದೆ. ನಮ್ಮ ಸಂಸ್ಥೆ ಎಲ್ಲ ವರ್ಗದ ಮಕ್ಕಳಿಗೆ ಸಮಾನ ಶಿಕ್ಷಣವನ್ನು ನೀಡುತ್ತಿದೆ. ಮಕ್ಕಳು ಅದನ್ನು ಸದುಪಯೋಗಪಡಿಸಿಕೊಂಡು ತಮ್ಮ ಪಾಲಕರ ಕನಸನ್ನು ಸಾಕಾರಗೊಳಿಸಬೇಕು ಎಂದರು. 
ಕ್ರೀಡೆಯಲ್ಲಿ ವಿಜೇತರದ ವಿದ್ಯಾರ್ಥಿಗಳಿಗೆ ಬಹುಮಾನ ಹಾಗೂ ವಿದ್ಯಾರ್ಥಿಗಳಿಗೆ ಉಪಾಹಾರ ಹಾಗೂ ಸಿಹಿ ವಿತರಿಸಲಾಯಿತು. ಪ್ರಾಂಶುಪಾಲರು, ಆಡಳಿತಧಿಕಾರಿಗಳು, ಉಪ ಪ್ರಾಂಶುಪಾಲರು, ಸಮನ್ವಯಾಧಿಕಾರಿಗಳು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
  26-ಪಿಎನ್‌ಪಿ 2: ಪಾಂಡವಪುರ ತಾಲೂಕಿನ ಚಿನಕುರಳಿಯ ಎಸ್‌ಟಿಜಿ ಶಿಕ್ಷಣ ಸಂಸ್ಥೆಯಲ್ಲಿ ಆಚರಿಸಲಾದ 77ನೇ ಗಣರಾಜ್ಯೋತ್ಸವದಲ್ಲಿ ರಾಷ್ಟ್ರೀಯ ಪ್ಯಾರ ಶೂಟರ್ ಕ್ರೀಡಾಪಟು ಎಂ.ಎಸ್.ನಾಗೇಂದ್ರ ಧ್ವಜಾರೋಹಣ ನೆರವೇರಿಸಿದರು. ಸಂಸ್ಥೆ ಸಿಇಒ ಸಿ.ಪಿ.ಶಿವರಾಜು ಇತರರು ಇದ್ದರು.