ಮಂಡ್ಯದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಸಮಾಜದ ಜಿಲ್ಲಾಧ್ಯಕ್ಷ ಕೆಂಪರಾಜು ಮಾತನಾಡಿದರು. 
ಮಂಡ್ಯ

ಜ.27ರಂದು ಸವಿತಾ ಮಹರ್ಷಿ ಜಯಂತಿ: ಸಮಾಜದ ಜಿಲ್ಲಾಧ್ಯಕ್ಷ ಕೆಂಪರಾಜು ಮಾಹಿತಿ

ಪ್ರಮುಖ ಮುಖ್ಯಾಂಶಗಳು

  • ಜ.27ರಂದು ಸವಿತಾ ಮಹರ್ಷಿ ಜಯಂತಿ
  • ಜಿಲ್ಲಾಡಳಿತದ ಸಹಯೋಗದಲ್ಲಿ ಆಯೋಜನೆ
  • ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸೇರಿ ಹಲವರು ಭಾಗಿ
ಮಂಡ್ಯ: ಜಿಲ್ಲಾ ಸವಿತಾ ಸಮಾಜ, ಜಿಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ಜ.27ರಂದು ಬೆಳಗ್ಗೆ 11 ಗಂಟೆಗೆ ನಗರದ ಕಲಾಮಂದಿರದಲ್ಲಿ ಸವಿತಾ ಮಹರ್ಷಿ ಜಯಂತಿ ಆಚರಿಸಲಾಗುವುದು ಎಂದು ಸಮಾಜದ ಜಿಲ್ಲಾಧ್ಯಕ್ಷ ಕೆಂಪರಾಜು ತಿಳಿಸಿದರು.
ಅಂದು ಬೆಳಗ್ಗೆ 9.30ಕ್ಕೆ ಬೆಳ್ಳಿ ರಥದಲ್ಲಿ ಸವಿತಾ ಮಹರ್ಷಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಜಿಲ್ಲಾಧಿಕಾರಿ ಡಾ.ಕುಮಾರ ಮೆರವಣಿಗೆ ಚಾಲನೆ ನೀಡುವರು ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಉಪಸ್ಥಿತಿಯಲ್ಲಿ ವೇದಿಕೆ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಉದ್ಘಾಟಿಸಲಿದ್ದಾರೆ. ಅಂತೆಯೇ ಅಂದು 100ಕ್ಕೂ ಹೆಚ್ಚು ಜನ ರಕ್ತದಾನ ಮಾಡಲಿದ್ದಾರೆ. ಎಲ್ಲ ಸಮುದಾಯಗಳು ಮುಖಂಡರು, ಸಾರ್ವಜನಿಕರು ಹಾಗೂ ಅಧಿಕಾರಿಗಳು ರಕ್ತದಾನ ಮಾಡುವಂತೆ ಮನವಿ ಮಾಡಿದರು.
ಸುರೇಶ್, ರಾಮಲಿಂಗು, ಮಂಜುನಾಥ್, ಮದ್ದೂರು ಸುರೇಶ್, ಕೃಷ್ಣ, ಮಳವಳ್ಳಿ ಮೋಹನ್ ಇದ್ದರು.