Dc D.Kumra 
ಮಂಡ್ಯ

ಸ್ವಯಂ ಗಣತಿಯಲ್ಲಿ ಸಾರ್ವಜನಿಕರು ಪಾಲ್ಗೊಳಿ: ಜಿಲ್ಲಾಧಿಕಾರಿ ಡಾ.ಕುಮಾರ ಮನವಿ

ಕೆ.ಎನ್.ರಾಘವೇಂದ್ರ

ಪ್ರಮುಖ ಮುಖ್ಯಾಂಶಗಳು

  • ಏ.1ರಿಂದ 15ರವರೆಗೆ ಸ್ವಯಂ ಗಣತಿಗೆ ಅವಕಾಶ
  • ಮನೆ ಪಟ್ಟಿ ಮತ್ತು ಮನೆಗಣತಿ ಕಾರ್ಯವು ಏ.16ರಿಂದ ಆರಂಭ
ಮಂಡ್ಯ: ಜನಗಣತಿ-2027ರ ಅಂಗವಾಗಿ ಸಾರ್ವಜನಿಕರು ಸುರಕ್ಷಿತ ವೆಬ್‌ಪೋರ್ಟಲ್ ಮೂಲಕ ಸ್ವಯಂ-ಗಣತಿಯಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಂಡು ಜನಗಣತಿಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಮನವಿ ಮಾಡಿದ್ದಾರೆ.
ಜಿಲ್ಲೆಯಲ್ಲಿ ಮನೆ ಪಟ್ಟಿ ಮತ್ತು ಮನೆಗಣತಿ ಕಾರ್ಯವು ಏ.16ರಿಂದ ಆರಂಭವಾಗಲಿದೆ. ಇದಕ್ಕೂ ಮುನ್ನ ಅಂದರೆ ಏ.1ರಿಂದ 15ರವರೆಗೆ ಸ್ವಯಂ ಗಣತಿಗೆ ಅವಕಾಶ ಕಲ್ಪಿಸಲಾಗಿದೆ. ಸಾರ್ವಜನಿಕರು ವೆಬ್ಸೈಟ್ www.se.census.gov.in ಬಳಸಿಕೊಂಡು ಲಾಗ್‌ಇನ್ ಆಗಿ ಮನೆಗಳ ಪಟ್ಟಿ ಮತ್ತು ವಸತಿ ಗಣತಿ ಸಂಬಂಧ ಕೇಳಲಾಗುವ 33 ಪ್ರಶ್ನೆಗೆ ಉತ್ತರಿಸಬೇಕಾಗುತ್ತದೆ. ಮಾಹಿತಿಯನ್ನು ಯಶಸ್ವಿಯಾಗಿ ಸಲ್ಲಿಸಿದ ನಂತರ ಎಸ್‌ಎಂಎಸ್ ಮತ್ತು ಈ ಮೇಲ್ ಫೋರ್ಟಲ್ಗೆ ರೆಫರೆನ್ಸ್ ಐ.ಡಿ ಸ್ವೀಕೃತವಾಗುತ್ತದೆ. ಗಣತಿದಾರರು ಮನೆಗೆ ಭೇಟಿ ನೀಡಿದಾಗ ಐ.ಡಿ ನೀಡುವ ಮೂಲಕ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕಿರುತ್ತದೆ. ಒಂದು ವೇಳೆ ಐ.ಡಿ ನೀಡದಿದ್ದರೆ ಗಣತಿದಾರರು ಮೊದಲಿನಿಂದ ಎಲ್ಲ ಪ್ರಶ್ನೆಗಳನ್ನು ಕೇಳಿ ಹೊಸದಾಗಿ ಗಣತಿ ಮಾಡಬೇಕಿರುತ್ತದೆ. ಸ್ವಯಂ ಗಣತಿಯಲ್ಲಿ ಪಾಲ್ಗೊಳ್ಳುವುದರಿಂದ ಗಣತಿದಾರರು ಬಂದಾಗ ಆಗುವ ಸಮಯ ವ್ಯಯವನ್ನು ತಪ್ಪಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.