ಮಂಡ್ಯ ನಗರದ ಕಲಾಮಂದಿರದಲ್ಲಿ ಶಂಕರಾಚಾರ್ಯರ ಜಯಂತಿ ಆಚರಿಸಲಾಯಿತು.  
ಮಂಡ್ಯ

ಮಾನವಿಯತೆ ಸಂದೇಶ ಸಾರಿದ ಶಂಕರಾಚಾರ್ಯ: ಎಎಸ್ಪಿ ಎಸ್.ಇ.ಗಂಗಾಧರಸ್ವಾಮಿ ಬಣ್ಣನೆ

ಪ್ರಮುಖ ಮುಖ್ಯಾಂಶಗಳು

  • ಕಲಾಮಂದಿರದಲ್ಲಿ ಶಂಕರಾಚಾರ್ಯರ ಜಯಂತಿ ಆಚರಣೆ
  • ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಆಯೋಜನೆ
ಮಂಡ್ಯ: ಶಂಕರಾಚಾರ್ಯರು ಜಗತ್ತಿಗೆ ಮಾನವೀಯ ಸಂದೇಶ ಸಾರುವ ಮೂಲಕ ಲೋಕ ಕಲ್ಯಾಣಕ್ಕಾಗಿ ಶ್ರಮಿಸಿದ್ದಾರೆ ಎಂದು ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಇ.ಗಂಗಾಧರಸ್ವಾಮಿ ಹೇಳಿದರು.
ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ನಗರದ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದಲ್ಲಿ ಆಯೋಜಿಸಿದ್ದ ಶಂಕರಾಚಾರ್ಯರ ಜಯಂತಿ ಉದ್ಘಾಟಿಸಿ ಮಾತನಾಡಿದ ಅವರು, ಅದ್ವೈತ ಸಿದ್ಧಾಂತವನ್ನು ಶಂಕರಾಚಾರ್ಯರು ಪ್ರತಿಪಾದಿಸಿದರು. ಹಿಂದೂ ಧರ್ಮದ ಮೌಲ್ಯಗಳನ್ನು ಜಗತ್ತಿಗೆ ಕಾಣುವಂತೆ ಎತ್ತಿ ಹಿಡಿದ ಮಹನೀಯರು. ಅವರ ತತ್ವ, ಆದರ್ಶಗಳನ್ನು ನಾವು ಜೀವನದಲ್ಲಿ ರೂಢಿಸಿಕೊಳ್ಳುವ ಮೂಲಕ ಸಮಾಜದಲ್ಲಿ ಸಾಮರಸ್ಯ ಕಾಪಾಡಬೇಕು ಎಂದರು
.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ವಿ.ನಂದೀಶ್, ಮುಖಂಡರಾದ ಶಂಕರನಾರಾಯಣ ಶಾಸ್ತ್ರಿ, ಬಿ.ಜಿ. ಉಮಾ, ಗೋಪಾಲಕೃಷ್ಣ ಶೆಣೈ ಇತರರಿದ್ದರು.