ಕೊಪ್ಪ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ಶಿವಲಿಂಗೇಗೌಡ ಅವರನ್ನು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎನ್.ದಿವಾಕರ್ ಅಭಿನಂದಿಸಿದರು. ಮಂಜುಳಾ, ಲಕ್ಷ್ಮಮ್ಮ ಈರೇಗೌಡ, ಕೃಷ್ಣೇಗೌಡ, ಲಿಂಗರಾಜು, ತೋಯಜಾಕ್ಷ, ರಾಮಕೃಷ್ಣ, ಶಿವಣ್ಣ, ಜಯರಾಮು, ರಮೇಶ್ ಇದ್ದರು.
- ಕೊಪ್ಪ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ
- ಎ.ಟಿ.ಪುಟ್ಟಸ್ವಾಮಿ ರಾಜೀನಾಮೆ ನೀಡಿದ ಹಿನ್ನೆಲೆ
ಮದ್ದೂರು: ತಾಲೂಕಿನ ಕೊಪ್ಪ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಶಿವಲಿಂಗೇಗೌಡ ಅವಿರೋಧವಾಗಿ ಆಯ್ಕೆಯಾದರು.
ಎ.ಟಿ.ಪುಟ್ಟಸ್ವಾಮಿ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಶುಕ್ರವಾರ ಸಂಘದ ಸಭಾಂಗಣದಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಶಿವಲಿಂಗೇಗೌಡ ಅವರನ್ನು ಹೊರತುಪಡಿಸಿ ಬೇರಾರೂ ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿ ಮಹದೇವು ಅವಿರೋಧ ಆಯ್ಕೆ ಘೋಷಣೆ ಮಾಡಿದರು.
ನೂತನ ಅಧ್ಯಕ್ಷ ಶಿವಲಿಂಗೇಗೌಡ ಮಾತನಾಡಿ, ಕೃಷಿ ಸಚಿವ ಎನ್.ಚಲುವರಾಯಸ್ವಾಮಿ, ಡಿಸಿಸಿ ಬ್ಯಾಂಕ್ ನಿರ್ದೇಶಕ ಕೆ.ಸಿ.ಜೋಗಿಗೌಡ ಹಾಗೂ ನಾಗಮಂಗಲ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎನ್.ದಿವಾಕರ್ ಅವರ ಸಹಕಾರದಿಂದ ಅಧ್ಯಕ್ಷನಾಗಿ ಆಯ್ಕೆಯಾಗಿದ್ದೇನೆ. ಕೊಪ್ಪ ಹೋಬಳಿ ವ್ಯಾಪ್ತಿಯಲ್ಲಿ ಸುಮಾರು 17 ಗ್ರಾಮಗಳನ್ನು ಹೊಂದಿರುವ ದೊಡ್ಡ ಸಂಘಕ್ಕೆ ಅಧ್ಯಕ್ಷನಾಗಿ ಅವಿರೋಧವಾಗಿ ಆಯ್ಕೆಯಾಗಿರುವುದು ಸಂತಸ ತಂದಿದೆ ಎಂದರು.
ಸಂಘದ ಸರ್ವತೋಮುಖ ಅಭಿವೃದ್ಧಿಗೆ, ಷೇರುದಾರರು ಹಾಗೂ ರೈತರಿಗೆ ಅನುಕೂಲವಾಗುವ ರೀತಿಯಲ್ಲಿ ಸಂಘದ ಎಲ್ಲ ನಿರ್ದೇಶಕರ ವಿಶ್ವಾಸಕ್ಕೆ ಪಡೆದು ಪ್ರಾಮಾಣಿಕವಾಗಿ ಕೆಲಸ ಮಾಡಲಾಗುವುದು. ಮುಂದಿನ ದಿನಗಳಲ್ಲಿ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರ ಸಹಕಾರದಿಂದ ವಿಶೇಷ ಅನುದಾನ ತಂದು ಸಂಘವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯಲಾಗುವುದು ಎಂದು ವಿಶ್ವಾಸ ವ್ಯಕ್ತ ಪಡಿಸಿದರು.
ಸಂಘದ ಉಪಾಧ್ಯಕ್ಷೆ ಮಂಜುಳಾ, ನಿರ್ದೇಶಕರಾದ ಲಕ್ಷ್ಮಮ್ಮ ಈರೇಗೌಡ, ಕೆ.ಜಿ.ಕೃಷ್ಣೇಗೌಡ, ಲಿಂಗರಾಜು, ರಾಮಕೃಷ್ಣ, ಶಿವಣ್ಣ, ಜಯರಾಮು, ರಮೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎನ್.ದಿವಾಕರ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಕೆ.ಸಿ.ಜೋಗಿಗೌಡ, ಗ್ರಾಪಂ ಅಧ್ಯಕ್ಷ ಸಂತೋಷ್ ಕೊಟ್ಟಿಗೆಯಾರ್, ಸದಸ್ಯರಾದ ಗಿರೀಶ್, ಮಹಮದ್ ಪರ್ವಿಜ್, ರುದ್ರೇಶ್, ನವೀನ್ ಕುಮಾರ್, ರಮೇಶ್‌ಗೌಡ, ತಾಪಂ ಮಾಜಿ ಸದಸ್ಯ ತೋಯಜಾಕ್ಷ, ಮುಖಂಡರಾದ ಪುಟ್ಟಸ್ವಾಮಿ, ರಾಮಚಂದ್ರ ಇತರರಿದ್ದರು.