ಹನುಮಂತನಗರದ ಶ್ರೀ ಆತ್ಮಲಿಂಗೇಶ್ವರ ದೇವಾಲಯದಲ್ಲಿ ಶಿವರಾತ್ರಿ ಅಂಗವಾಗಿ ಅದ್ದೂರಿ ತೆಪ್ಪೋತ್ಸವ ಜರುಗಿತು.
- ವಿಧಾನ ಪರಿಷತ್ ಸದಸ್ಯ ಮಧು ಜಿ.ಮಾದೇಗೌಡ ಚಾಲನೆ
ಕೆ.ಎಂ.ದೊಡ್ಡಿ: ಸಮೀಪದ ಹನುಮಂತನಗರದ ಶ್ರೀ ಆತ್ಮಲಿಂಗೇಶ್ವರ ದೇವಾಲಯದಲ್ಲಿ ಶಿವರಾತ್ರಿ ಅಂಗವಾಗಿ ಬುಧವಾರ ರಾತ್ರಿ ಅದ್ದೂರಿ ತೆಪ್ಪೋತ್ಸವ ನಡೆಯಿತು.
ಕಳೆದ ಐದು ದಿನಗಳಿಂದ ದೇವಾಲಯದಲ್ಲಿ ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮ ಸಾಂಗವಾಗಿ ಜರುಗಿದವು. ಈ ವೇಳೆ ವಿಧಾನ ಪರಿಷತ್ ಸದಸ್ಯ ಮಧು ಜಿ.ಮಾದೇಗೌಡ ದೇವಾಲಯದಲ್ಲಿ ಶಿವ-ಪಾರ್ವತಿಯ ಉತ್ಸವ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ತೆಪ್ಪೋತ್ಸವಕ್ಕೆ ಚಾಲನೆ ನೀಡಿದರು. ಪಾವನಗಂಗೆಯ ಕಲ್ಯಾಣಿಗೆ ವಿದ್ಯುತ್ ದೀಪಾಲಂಕಾರ ಮಾಡಲಾಗಿತ್ತು.
ವಿಧಾನ ಪರಿಷತ್ ಸದಸ್ಯ ಮಧು ಜಿ.ಮಾದೇಗೌಡ ಮಾತನಾಡಿ, ದೇವಾಲಯಕ್ಕೆ ಹೆಚ್ಚು ಭಕ್ತರು ಆಗಮಿಸಿ ದೇವರ ಕೃಪೆಗೆ ಪಾತ್ರರಾಗಲಿ ಎಂಬ ದೃಷ್ಟಿಯಿಂದ ತೆಪ್ಪೋತ್ಸವ ಯಶಸ್ವಿಯಾಗಿ ನಡೆಸಲಾಯಿತು. ಮುಂದಿನ ವರ್ಷ ಇನ್ನು ಅದ್ದೂರಿಯಾಗಿ ದೇವಾಲಯದಲ್ಲಿ ವಿವಿಧ ಕಾರ್ಯಕ್ರಮಗಳು ಜರುಗಲಿವೆ ಎಂದು ಭರವಸೆ ನೀಡಿದರು.
ಭಾರತೀ ಎಜುಕೇಷನ್ ಟ್ರಸ್ಟ್ ಮುಖ್ಯ ಕಾರ್ಯನಿರ್ವಣಾಧಿಕಾರಿ ಆಶಯ್ ಮಧು, ಕಾರ್ಯಾಧ್ಯಕ್ಷ ಬಿ.ಬಸವರಾಜು, ಕಾರ್ಯದರ್ಶಿಗಳಾದ ಬಿ.ಎಂ.ನಂಜೇಗೌಡ, ಗುರುದೇವರಹಳ್ಳಿ ಸಿದ್ದೇಗೌಡ, ಭಾರತೀ ಹೆಲ್ತ್ ಸೈನ್ಸ್ ನಿರ್ದೇಶಕ ಡಾ.ತಮಿಜ್‌ಮಣಿ, ಡಾ. ಎಂ.ಎಸ್. ಮಹದೇವಸ್ವಾಮಿ, ಡಾ. ಬಾಲಸುಬ್ರಮಣ್ಯಂ, ಡಾ.ಎಸ್.ಎಲ್. ಸುರೇಶ್, ಡಾ. ಶಾಂತಕುಮಾರ್, ಜಗದೀಶ್, ಸಿ.ವಿ.ಮಲ್ಲಿಕಾರ್ಜುನ, ಪುಟ್ಟಸ್ವಾಮಿ, ಕೆ.ಎಸ್.ಗೌಡ, ಆರ್. ಸಿದ್ದಪ್ಪ ಇತರರಿದ್ದರು.