ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹುಟ್ಟುಹಬ್ಬದ ಅಂಗವಾಗಿ ಮದ್ದೂರು ನಗರದ ಪುರಾಣ ಪ್ರಸಿದ್ಧ ಶ್ರೀ ಉಗ್ರ ನರಸಿಂಹಸ್ವಾಮಿ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿ ಸಿಹಿ ವಿತರಿಸಲಾಯಿತು. ಕುರುಬ ಸಮಾಜದ ತಾಲೂಕು ಅಧ್ಯಕ್ಷ ಅಶ್ವಿನ್ ರಾಮಕೃಷ್ಣೇಗೌಡ ಅವರ ನೇತೃತ್ವದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಸಿಹಿ ವಿತರಿಸಲಾಯಿತು. ರಾಮಕೃಷ್ಣ, ಎಂ.ಡಿ.ಮಹಾಲಿಂಗಯ್ಯ, ಅಶ್ವಿನ್‌ಗೌಡ, ನಾರಾಯಣಗೌಡ, ದಿನೇಶ್, ಕಿರಣ್, ಶ್ರೀಧರ್ ಇತರರು ಇದ್ದರು.  
ಮಂಡ್ಯ

ಜನ ಮೆಚ್ಚಿದ ರಾಜಕಾರಣಿ ಸಿದ್ದರಾಮಯ್ಯ

ಪ್ರಮುಖ ಮುಖ್ಯಾಂಶಗಳು

  • ಕುರುಬರ ಸಂಘದ ತಾಲೂಕು ಅಧ್ಯಕ್ಷ ಅಶ್ವಿನ್ ರಾಮಕೃಷ್ಣೇಗೌಡ ಬಣ್ಣನೆ
  • ಮಾಜಿ ಸಿಎಂ ಹುಟ್ಟುಹಬ್ಬಕ್ಕೆ ವಿಶೇಷ ಪೂಜೆ, ಸಿಹಿ ವಿತರಣೆ

ಮದ್ದೂರು:

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹುಟ್ಟುಹಬ್ಬದ ಅಂಗವಾಗಿ ನಗರದ ಪುರಾಣ ಪ್ರಸಿದ್ಧ ಶ್ರೀ ಉಗ್ರ ನರಸಿಂಹಸ್ವಾಮಿ ದೇಗುಲದಲ್ಲಿ ಸಿದ್ದರಾಮಯ್ಯ ಅಭಿಮಾನಿಗಳ ಬಳಗ ಹಾಗೂ ಕರುಬ ಸಮಾಜದ ವತಿಯಿಂದ ಸೋಮವಾರ ವಿಶೇಷ ಪೂಜೆ ಸಲ್ಲಿಸಿ ಸಿಹಿ ವಿತರಿಸಲಾಯಿತು.

ಕಾರ್ಯಕ್ರಮದ ನೇತೃತ್ವ ವಹಿಸಿದ್ದ ಕುರುಬ ಸಮಾಜದ ತಾಲೂಕು ಅಧ್ಯಕ್ಷ ಅಶ್ವಿನ್ ರಾಮಕೃಷ್ಣೇಗೌಡ ಮಾತನಾಡಿ, ಸಿದ್ದರಾಮಯ್ಯ ಅವರು ಯಾವುದೇ ಕಾರಣಕ್ಕೂ ಚುನಾವಣಾ ರಾಜಕೀಯದಿಂದ ನಿವೃತ್ತರಾಗಬಾರದು. ಇದನ್ನು ಅಭಿಮಾನಿಗಳು ಯಾವುದೇ ಕಾರಣಕ್ಕೂ ಒಪ್ಪುವುದಿಲ್ಲ. ಸಕ್ರಿಯ ರಾಜಕಾರಣದಲ್ಲಿದ್ದು, ಅವರ ಆಗಾಧ ರಾಜಕೀಯ ಅನುಭವನ್ನು ರಾಜ್ಯದ ಪ್ರಗತಿಗೆ ಧಾರೆ ಎರೆಯಬೇಕಿದೆ ಎಂದರು.
ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸುಮಾರು 48 ವರ್ಷಗಳ ಕಾಲ ನಿರಂತರವಾಗಿ ಜನರೊಂದಿಗೆ ಬೆರೆತು ಜನ ಮೆಚ್ಚುವ ರೀತಿಯಲ್ಲಿ ರಾಜಕಾರಣ ಮಾಡಿದ್ದಾರೆ. ಹಲವಾರು ಭಾಗ್ಯಗಳನ್ನು ರಾಜ್ಯದ ಜನರಿಗೆ ನೀಡಿ ಜನಮಾನಸದಲ್ಲಿ ಅಚ್ಚಳಿಯದೆ ಉಳಿದಿದ್ದಾರೆ ಎಂದು ಬಣ್ಣಿಸಿದರು. ಮುಖಂಡರಾದ ರಾಮಕೃಷ್ಣ, ಎಂ.ಡಿ.ಮಹಾಲಿಂಗಯ್ಯ, ಅಶ್ವಿನ್‌ಗೌಡ, ನಾರಾಯಣಗೌಡ, ದಿನೇಶ್, ಕಿರಣ್, ಶ್ರೀಧರ್, ಕುಮಾರ್, ಜವರಪ್ಪ, ಈಶ್ಚರ್, ಮಲ್ಲರಾಜು, ಮರಿಕಾಳೇಗೌಡ, ಮನುಕುಮಾರ್, ರಾಜೇಂದ್ರ, ರಮೇಶ್, ಸಿದ್ದರಾಜು, ಚಿಕ್ಕಮ್ಮ, ಕರಿಯಪ್ಪ, ಬಸವಣ್ಣ, ನಾಗರಾಜು ಇತರರು ಇದ್ದರು.