ಪಾಂಡವಪುರ ಪಟ್ಟಣದ ವಿಜಯ ಕಾಲೇಜಿನಲ್ಲಿ ನಡೆದ ರಾಜ್ಯಮಟ್ಟದ ವಿಚಾರ ಸಂಕಿರಣ ಕಾರ‌್ಯಕ್ರಮದ ಸಮಾರೋಪ ಸಮಾರಂಭದಲ್ಲಿ ವಿಶ್ವ ಒಕ್ಕಲಿಗರ ಮಠದ ಪೀಠಾಧ್ಯಕ್ಷ ಡಾ.ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಮಾತನಾಡಿದರು. ಎಚ್.ಎಲ್.ಮಂಜುನಾಥ್, ಪ್ರಕಾಶ್ ಚಿಕ್ಕಪಾಳ್ಯ, ಕೆ.ವಿ.ಬಸವರಾಜು, ಡಾ.ಕೆ.ಚನ್ನಕೃಷ್ಣಯ್ಯ, ಡಾ.ಎಸ್.ಎಲ್.ಸುರೇಶ್, ಡಾ.ಎ.ಸಿ.ಮಂಜುಳಾ ಇದ್ದರು.
ವಿಶ್ವ ಒಕ್ಕಲಿಗರ ಮಠದ ಪೀಠಾಧ್ಯಕ್ಷ ಡಾ.ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಅಭಿಮತ
ಪಾಂಡವಪುರ: ಮಹಾತ್ಮ ಗಾಂಧೀಜಿ ಹಾಗೂ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಆದರ್ಶಗಳು ಸಮಾಜಕ್ಕೆ ಬೇಕಾಗಿವೆ ಎಂದು ಬೆಂಗಳೂರಿನ ವಿಶ್ವ ಒಕ್ಕಲಿಗರ ಮಠದ ಪೀಠಾಧ್ಯಕ್ಷ ಡಾ.ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಹೇಳಿದರು.
ಪಟ್ಟಣದ ವಿದ್ಯಾ ಪ್ರಚಾರ ಸಂಘದ ವಿಜಯ ಕಾಲೇಜಿನಲ್ಲಿ ಬುಧವಾರ ಆಯೋಜಿಸಿದ್ದ ‘ಮರಳಿ ಮನಕೆ ಗಾಂಧಿ ಮತ್ತು ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಚಿಂತನೆಗಳ ಪ್ರಸ್ತುತಿ’ ವಿಚಾರ ಕುರಿತು ರಾಜ್ಯಮಟ್ಟದ ವಿಚಾರಸಂಕಿರಣ ಸಮಾರೋಪ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿ, ಗಾಂಧೀಜಿ ಹಾಗೂ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ತತ್ವ-ಸಿದ್ಧಾಂತಗಳು, ಗುರಿ, ಉದ್ದೇಶ, ಮೂಲಭೂತ ಕರ್ತವ್ಯಗಳನ್ನು ದೇಶದ ಜನರು ಪಾಲನೆ ಮಾಡಿದರೆ ಸಾಕು, ಮತ್ಯಾರ ಉಪದೇಶಗಳ ಅವಶ್ಯಕತೆಯೇ ಇರುವುದಿಲ್ಲ ಎಂದರು.
ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷರೂ ಆದ ಮಾಜಿ ಶಾಸಕ ಡಿ.ಆರ್.ಪಾಟೀಲ್ ಮಾತನಾಡಿ, ಬದಲಾವಣೆ ಎನ್ನುವುದು ಮೊದಲು ನಮ್ಮೊಳಗೆ ಆಗಬೇಕು. ನಾವು ಬದಲಾದರೆ ಸಮಾಜ, ನಮ್ಮ ಸುತ್ತಮುತ್ತಲಿನವರು ತಾವಾಗಿಯೇ ಬದಲಾಗುತ್ತಾರೆ ಎಂದು ತಿಳಿಸಿದರು.
ಮೈಸೂರಿನ ಪತ್ರಗಾರ ಇಲಾಖೆ ಉಪನಿರ್ದೇಶಕ ಎಚ್.ಎಲ್.ಮಂಜುನಾಥ್, ವಿಸ್ಮಯ ಪ್ರಕಾಶನ ಸಂಸ್ಥೆಯ ಪ್ರಕಾಶ್ ಚಿಕ್ಕಪಾಳ್ಯ, ಸಂಸ್ಥೆ ಕಾರ್ಯದರ್ಶಿ ಕೆ.ವಿ.ಬಸವರಾಜು, ಮಂಡ್ಯ ವಿವಿ ಬಿ.ಇಡಿ ಕಾಲೇಜು ಅಧ್ಯಾಪಕರ ಸಂಘದ ಅಧ್ಯಕ್ಷ ಡಾ.ಕೆ.ಚನ್ನಕೃಷ್ಣಯ್ಯ, ಗೌರವ ಅಧ್ಯಕ್ಷ ಡಾ.ಎಸ್.ಎಲ್.ಸುರೇಶ್, ಇತಿಹಾಸ ಅಧ್ಯಾಪಕದ ಸಂಘದ ಕಾರ್ಯದರ್ಶಿ ಡಾ.ಎ.ಸಿ.ಮಂಜುಳಾ, ಚಿನಕುರಳಿ ಎಸ್‌ಟಿಜಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ನಿಶಾಂತ್ ಎ.ನಾಯ್ಡು, ಗಾಂಧಿ ಸ್ಮಾರಕ ನಿಧಿ ನಿರ್ದೇಶಕ ಪ್ರೊ.ಜಿ.ಬಿ.ಶಿವರಾಜು, ಭೂ ದಾಖಲೆಗಳ ಇಲಾಖೆ ನಿವೃತ್ತ ಜಂಟಿ ನಿರ್ದೇಶಕ ಎಂ.ಎಸ್.ಮರಿಸ್ವಾಮಿಗೌಡ, ಪರಿವರ್ತನಾ ಸಮೂಹ ಶಿಕ್ಷಣ ಸಂಸ್ಥೆಗಳ ಶೈಕ್ಷಣಿಕ ನಿರ್ದೇಶಕ ಪ್ರೊ.ಎನ್.ರಾಮು, ಪ್ರಾಂಶುಪಾಲ ಕೃಷ್ಣಮೂರ್ತಿ, ವಿಜಯ ಶಿಕ್ಷಣ ಮಹಾ ವಿದ್ಯಾಲಯದ ಪ್ರಾಂಶುಪಾಲ ಡಾ.ಎನ್.ಕೆ.ವೆಂಕಟೇಗೌಡ ಸೇರಿದಂತೆ ಆಡಳಿತ ಮಂಡಳಿಯ ನಿರ್ದೇಶಕರು, ಉಪನ್ಯಾಸಕರು, ಸಿಬ್ಬಂದಿ ವರ್ಗದವರು ಹಾಜರಿದ್ದರು.