ನಾಲ್ಕನೇ ಆಷಾಡ ಶುಕ್ರವಾರದ ಹಿನ್ನೆಲೆಯಲ್ಲಿ ಮದ್ದೂರು ನಗರದ ಶಕ್ತಿ ದೇವತೆ ಶ್ರೀ ಮದ್ದೂರಮ್ಮನಿಗೆ ವಿಶೇಷ ಅಲಂಕಾರ ಮಾಡಿರುವುದು.
ಮದ್ದೂರು: ನಾಲ್ಕನೇ ಆಷಾಢ ಶುಕ್ರವಾರದ ಹಿನ್ನೆಲೆಯಲ್ಲಿ ನಗರದ ಹೊಳೆಬೀದಿಯಲ್ಲಿರುವ ಶ್ರೀ ರೇಣುಕಾ ಎಲ್ಲಮ್ಮ ತಾಯಿ ದೇವಸ್ಥಾನದಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು ನಡೆದವು.
ಬೆಳಗ್ಗೆಯಿಂದಲೇ ದೇವರ ವಿಗ್ರಹಕ್ಕೆ ಅಭಿಷೇಕ, ವಿಶೇಷ ಹೂವಿನ ಅಲಂಕಾರ, ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ ಕಾರ್ಯಕ್ರಮಗಳು ನೆರವೇರಿದವು.
ನೂರಾರು ಭಕ್ತಾಧಿಗಳು ಆಗಮಿಸಿ ದೇವಿಯವರ ದರ್ಶನ ಪಡೆದರು, ದೇವಸ್ಥಾನದ ಧರ್ಮದರ್ಶಿ ಶ್ರೀನಿವಾಸ್ ಸೇರಿದಂತೆ ಟ್ರಸ್ಟ್ ನ ಪದಾಧಿಕಾರಿಗಳು ಪೂಜಾ ಕಾರ್ಯಕ್ರಮಗಳ ನೇತೃತ್ವ ವಹಿಸಿದ್ದರು.