ಮದ್ದೂರು ನಗರದ ಪುರಾಣ ಪ್ರಸಿದ್ಧ ಶ್ರೀ ಹೊಳೆ ಆಂಜನೇಯಸ್ವಾಮಿಗೆ ವಿಶೇಷ ಅಲಂಕಾರ ಮಾಡಿರುವುದು. 
ಮಂಡ್ಯ

ಶ್ರೀ ಹೊಳೆ ಆಂಜನೇಯಸ್ವಾಮಿಗೆ ವಿಶೇಷ ಪೂಜೆ ಇಂದು

ಮದ್ದೂರು: ಭೀಮನ ಅಮಾವಾಸ್ಯೆ ಅಂಗವಾಗಿ ಆ.12 (ಬುಧವಾರ) ಪುರಾಣ ಪ್ರಸಿದ್ಧ ಶ್ರೀ ಹೊಳೆ ಆಂಜನೇಯಸ್ವಾಮಿ ದೇಗುಲದಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ದೇಗುಲದ ಪ್ರಧಾನ ಅರ್ಚಕ ಪ್ರದೀಪ್ ಆಚಾರ್ಯ ತಿಳಿಸಿದ್ದಾರೆ.

ಅಮಾವಾಸ್ಯೆ ಅಂಗವಾಗಿ ದೇಗುಲದಲ್ಲಿ ಮುಂಜಾನೆಯಿಂದಲೇ ಮಧು ಅಭಿಷೇಕ, ದೇವರಿಗೆ ವಿಶೇಷವಾಗಿ ಬೆಣ್ಣೆ ಅಲಂಕಾರ, ಮಹಾ ಮಂಗಳಾರತಿ ಸೇರಿದಂತೆ ವಿಶೇಷ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ನಂತರ ಭಕ್ತಾದಿಗಳಿಗೆ ಪ್ರಸಾದ ವಿತರಣೆ ಮಾಡಲಾಗುವುದು ಎಂದು ಹೇಳಿದ್ದಾರೆ.
ರಾಜ್ಯದ ವಿವಿಧ ಭಾಗಗಳಿಂದ ಸಹಸ್ರಾರು ಭಕ್ತಾದಿಗಳಿಗೆ ದೇವರ ದರ್ಶನಕ್ಕೆ ಆಗಮಿಸುತ್ತಿದ್ದು ಅವರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ವಹಿಸಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸಬೇಕೆಂದು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.