ಪಟ್ಟಣದ ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ರಾಷ್ಟ್ರೀಯ ಜಂತುಹುಳು ನಿವಾರಣ ಕಾರ್ಯಕ್ರಮದ ಅಂಗವಾಗಿ ಅಧಿಕಾರಿಗಳಿಗಾಗಿ ಏರ್ಪಡಿಸಿದ್ದ ತರಬೇತಿ ಕಾರ್ಯಕ್ರಮದಲ್ಲಿ ತಾಲೂಕು ಸಾರ್ವಜನಿಕ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ.ಶ್ರೀಧರ್. ಸಿ.ಎಂ ಜಂತುಹುಳು ನಿವಾರಣಾ ಕಾರ್ಯಕ್ರಮದ ಬಿತ್ತಿ ಪತ್ರ ಬಿಡುಗಡೆಗೊಳಿಸಿದರು. 
ಮಂಡ್ಯ

ಜಂತುಹುಳು ನಿವಾರಣಾ ಕಾರ್ಯಕ್ರಮದ ಬಿತ್ತಿ ಪತ್ರ ಬಿಡುಗಡೆ

ಎ. ಆರ್. ರಘುರಾಮ
ಶ್ರೀರಂಗಪಟ್ಟಣ : ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮದಡಿಯಲ್ಲಿ ಯಾವುದೇ ಮಗು ಜಂತು ನಿವಾರಕ ಮಾತ್ರೆಯಿಂದ ವಂಚಿತರಾಗದಂತೆ ಸಿಬ್ಬಂದಿಗಳು ಕ್ರಮವಹಿಸಬೇಕೆಂದು ತಾಲೂಕು ಸಾರ್ವಜನಿಕ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ.ಶ್ರೀಧರ್. ಸಿ.ಎಂ ಹೇಳಿದರು.
ಪಟ್ಟಣದ ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ರಾಷ್ಟ್ರೀಯ ಜಂತುಹುಳು ನಿವಾರಣ ಕಾರ್ಯಕ್ರಮದ ಅಂಗವಾಗಿ ಅಧಿಕಾರಿಗಳಿಗಾಗಿ ಏರ್ಪಡಿಸಿದ್ದ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಮಕ್ಕಳು ಮತ್ತು ಹದಿಹರೆಯದವರಲ್ಲಿ ಕಂಡುಬರುವ ಜಂತು ಬಾಧೆ, ಅಪೌಷ್ಟಿಕತೆ ಮತ್ತು ರಕ್ತಹೀನತೆ ತಡೆಗಟ್ಟುವ ಸಲುವಾಗಿ ರಾಜ್ಯಾದ್ಯಂತ ಫೆ 10 ರಂದು ರಾಷ್ಟ್ರೀಯ ಜಂತುಹುಳು ನಿವಾರಣ ದಿನ ಹಮ್ಮಿಕೊಳ್ಳಲಾಗಿದ್ದು 1 ರಿಂದ 19 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಜಂತು ನಿವಾರಣ ಅಲ್ಬಂಡಾಜೋಲ್ ಮಾತ್ರೆಗಳನ್ನು ಅಂಗನವಾಡಿ ಕೇಂದ್ರದ ಮಕ್ಕಳಿಗೆ,ಶಾಲೆ, ಕಾಲೇಜು ವಿದ್ಯಾರ್ಥಿಗಳಿಗೆ ತಪ್ಪದೆ ನೀಡಬೇಕು ಜತೆಗೆ ಈ ಬಗ್ಗೆ ಪೋಷಕರಿಗೆ ಅರಿವು ಮೂಡಿಸಬೇಕೆಂದು ಸಲಹೆ ನೀಡಿದರು.
ಇದೇ ವೇಳೆ ಜಂತುಹುಳು ನಿವಾರಣಾ ಕಾರ್ಯಕ್ರಮದ ಬಿತ್ತಿ ಪತ್ರ ಬಿಡುಗಡೆಗೊಳಿಸಿದರು.
ತರಬೇತಿ ಕಾರ್ಯಗಾರದಲ್ಲಿ ತಾಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಜಿ ಮೋಹನ್,ಜಿ ಬಿ.ಹೇಮಣ್ಣ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಜಯರಾಮ್ ಟಿ.ಬಿ, ಚಿಕ್ಕ ಬೋರಯ್ಯ, ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕ ಅಭಿನಂದನ್, ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಪುಣ್ಯವತಿ, ಶಾಂತರಾಮ, ನರ್ಸಿಂಗ್ ಅಧಿಕಾರಿ ಕುಸುಮ, ವಸತಿ ಶಾಲಾ ನರ್ಸಿಂಗ್ ಅಧಿಕಾರಿ ಶಿವಮ್ಮ, ತ್ರಿವೇಣಿ, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಸ್ಮಿತಾ, ಲಲಿತಾ ಹಾಗೂ ಎಲ್ಲಾ ಶಾಲೆಯ ವಿಜ್ಞಾನ ಶಿಕ್ಷಕರು, ಕ್ಷೇತ್ರ ಮಟ್ಟದ ಆರೋಗ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.